ನವದೆಹಲಿ: ಸಿಯಾಚಿನ್ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರ ಪತ್ನಿ ಮಹಾದೇವಿ ಕೊಪ್ಪದ್ ಅವರಿಗೆ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಕೇಂದ್ರ ರೇಷ್ಮೆ ಬೋರ್ಡ್‍ನಲ್ಲಿ ಉದ್ಯೋಗಾವಕಾಶ ನೀಡಿದ್ದಾರೆ.
ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರು ಸಿಯಾಚಿನ್‍ನಲ್ಲಿ ಹಿಮಪಾತದಲ್ಲಿ ಸಿಲುಕಿ 6 ದಿನಗಳ ನಂತರ ಜೀವಂತವಾಗಿ ಪತ್ತೆಯಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಅವರು 2016ರ ಫೆಬ್ರವರಿಯಲ್ಲಿ ಮೃತಪಟ್ಟಿದ್ದರು.
Advertisement
Advertisement
ಬಳಿಕ ರಾಜ್ಯ ಸರ್ಕಾರ ಕೊಪ್ಪದ್ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, 4 ಎಕರೆ ಜಮೀನು ನೀಡಿತ್ತು. ಕೊಪ್ಪದ್ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡುವುದಾಗಿ ಭರವಸೆ ನೀಡಿತ್ತು. ಆದ್ರೆ ವರ್ಷವಾದ್ರೂ ರಾಜ್ಯ ಸರ್ಕಾರ ಈ ಬಗ್ಗೆ ಮಾತನಾಡಿಲ್ಲ. ಈ ಮಧ್ಯೆ ಕೇಂದ್ರ ಸಚಿವೆ ಇರಾನಿ ಮಹಾದೇವಿ ಕೊಪ್ಪದ್ ಅವರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದು ಜಾಬ್ ಆಫರ್ ಲೆಟರ್ ಕಳಿಸಿದ್ದಾರೆ.
Advertisement
Advertisement
ಕೊಪ್ಪದ್ ತಮ್ಮ ಹೆಂಡತಿ, 3 ವರ್ಷದ ಮಗು ನೇತ್ರಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದರು. ಇದೇ ವರ್ಷ ಹನುಮಂತಪ್ಪ ಕೊಪ್ಪದ್ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.