ಬಡವರನ್ನು ಲೂಟಿ ಮಾಡಿದವರು ಈಗ ದೇಶ ಕೊಳ್ಳೆ ಹೊಡೆಯಲು ಒಂದಾಗಿದ್ದಾರೆ: ಇರಾನಿ

Public TV
1 Min Read

ಹೈದರಾಬಾದ್: ಕುಟುಂಬದ ಲಾಭಕ್ಕಾಗಿ ಬಡವರನ್ನು ಲೂಟಿ ಮಾಡಿದವರು ಈಗ ದೇಶವನ್ನು ಕೊಳ್ಳೆ ಹೊಡೆಯಲು ಮಹಾಘಟಬಂಧನ್ ಮಾಡಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟಿಸುವ ನಿಟ್ಟಿನಲ್ಲಿ ಮಾತನಾಡಿದ ಅವರು, ಬಡವರ ಅಭಿವೃದ್ಧಿಗೆ ಮೋದಿ ಸರ್ಕಾರ ಮಾಡಿರುವ ಕೆಲಸವನ್ನು ವಿರೋಧ ಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣಕ್ಕಾಗಿ ವಿರೋಧಿಗಳೆಲ್ಲ ಒಂದಾಗಿದ್ದಾರೆಂದು ಅವರು ದೂರಿದರು.

1432209548 9526

ಯಾರು ಭ್ರಷ್ಟಾಚಾರ ಹಾಗೂ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೋ ಅವರು ಪ್ರಧಾನ ಸೇವಕರಾದ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿದ್ದಾರೆ. ಇಲ್ಲಿಯವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ಸಿನ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದರು.

ಗಾಂಧಿ ಕುಟುಂಬದ ಅಳಿಯ ರಾಬರ್ಟ್ ವಾದ್ರಾ ಅವರ ಅಕ್ರಮ ಆಸ್ಥಿಗಳಿಕೆ ವಿಚಾರವಾಗಿ ಪ್ರತಿಕಿಯಿಸಿ, ಶ್ರೀಮಂತರ ಮಧ್ಯೆ ವಾಸಿಸುತ್ತ ವರ್ಷಗಳಿಂದ ಬಡವರನ್ನು ಕೊಳ್ಳೆಹೊಡೆಯುತ್ತ ಬಂದಿದ್ದಾರೆ. ಅವರ ಕುಟುಂಬದ ಅಳಿಯ ಲಂಡನ್‍ನಲ್ಲಿ ಸಾಕಷ್ಟು ಆಸ್ತಿ ಖರೀದಿಸಿದ್ದಾರೆ. ಹೀಗಿರುವಾಗ ಇಂತವರು ಪ್ರಧಾನಮಂತ್ರಿಗಳ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *