ನವದೆಹಲಿ: ಗೋವಾದಲ್ಲಿ ಅಕ್ರಮವಾಗಿ ಬಾರ್ ಹೊಂದಿದ್ದಾರೆ ಎಂದು ತಮ್ಮ ಪುತ್ರಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೋಟಿಸ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕರಾದ ಪವನ್ ಖೇರಾ, ಜೈರಾಮ್ ರಮೇಶ್, ನೆಟ್ಟಾ ಡಿಸೋಜಾ ಅವರಿಗೆ ಸ್ಮೃತಿ ಇರಾನಿ ಲೀಗಲ್ ನೋಟಿಸ್ ಕೊಟ್ಟಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು. ನಿಮ್ಮ ಎಲ್ಲಾ ಆರೋಪಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಕೇಂದ್ರ ಸಚಿವೆ ಎಚ್ಚರಿಸಿದ್ದಾರೆ. ನನ್ನ 18 ವರ್ಷ ವಯಸ್ಸಿನ ಪುತ್ರಿ ವಿರುದ್ಧ ಅಕ್ರಮ ಬಾರ್ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಪುತ್ರಿಯ ಅಕ್ರಮ ಬಾರ್- ಸ್ಮೃತಿ ಇರಾನಿಯನ್ನು ವಜಾಗೊಳಿಸುವಂತೆ ಮೋದಿಗೆ ಒತ್ತಾಯ
Advertisement
So, @IYCGoa Workers visited Tulsi Sanskari Bar & removed the tapes concealing the identity of BAR after the Exposé. pic.twitter.com/iqkiE8d47L
— Srinivas BV (@srinivasiyc) July 24, 2022
Advertisement
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್, ಕೂಡಲೇ ಸ್ಮೃತಿ ಇರಾನಿ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿತ್ತು.
Advertisement
Advertisement
ಸ್ಮೃತಿ ಇರಾನಿ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳಿವೆ. ಇರಾನಿ ಅವರ ಪುತ್ರಿ ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಅದರಲ್ಲಿ ಬಾರ್ ಕೂಡ ಇದ್ದು, ನಕಲಿ ಪರವಾನಗಿ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಆರೋಪಿಸಿದ್ದರು. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು – ವೀಡಿಯೋ ವೈರಲ್
ಸ್ಮೃತಿ ಇರಾನಿ ಅವರನ್ನು ಕೇಂದ್ರ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪವನ್ ಹೇಳಿದ್ದರು.
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಇ.ಡಿ ವಿಚಾರಣೆ ಎದುರಿಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಕುರಿತು ನಿಲುವು ವ್ಯಕ್ತಪಡಿಸಿರುವುದಕ್ಕೆ ನನ್ನ ಪುತ್ರಿಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ನನ್ನ ಮಗಳ ಚಾರಿತ್ರ್ಯ ಹರಣ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಕಿಡಿಕಾರಿದ್ದರು.