ದುಬೈ: ಇಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್ (Women’s Asia Cup) ಟೂರ್ನಿಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಮೂಲಕ ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಮತ್ತೊಂದು ವಿಶ್ವದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.
ಹೌದು. ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾದರು. ಇಂದು ಪಾಕ್ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ವಿಶ್ವದಾಖಲೆ ಮುರಿಯುವ ಸನಿಹದಲ್ಲಿದ್ದಾರೆ ಮಂಧಾನ.

ಪ್ರಸ್ತುತ ಮಂಧಾನ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4,681 ರನ್ ಗಳಿಸಿದ್ದು, ಅತಿಹೆಚ್ಚು ರನ್ ಗಳಿಸಿದ ಮಹಿಳಾ ಆಟಗಾರರ ಪೈಕಿ 2ನೇ ಸ್ಥಾನದಲ್ಲಿದ್ದಾರೆ. 4,758 ರನ್ ಗಳಿಸಿರುವ ನ್ಯೂಜಿಲೆಂಡ್‌ನ ಸುಜಿ ಬೇಟ್ಸ್ ಅಗ್ರಸ್ಥಾನದಲ್ಲಿದ್ದಾರೆ. ಸುಜಿ ಬೇಟ್ಸ್ ದಾಖಲೆ ನುಚ್ಚುನೂರು ಮಾಡಲು ಮಂಧಾನ ಅವರಿಗೆ 74 ರನ್‌ಗಳ ಅಗತ್ಯವಿದೆ. ಹೀಗಾಗಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಮಂಧಾನ ಅವರಿಂದು ಪಾಕ್ ವಿರುದ್ಧ 74 ರನ್ ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಿದ್ರೆ, ಮಹಿಳಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲೂ ನಂ.1 ಆಟಗಾರ್ತಿಯಾಗಿ ಹೊರಹೊಮ್ಮಲಿದ್ದಾರೆ.
ಮಹಿಳಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಟಾಪ್-5 ಆಟಗಾರ್ತಿಯರು ಯಾರು?
* ಸುಜಿ ಬೇಟ್ಸ್ – 4,758 (ನ್ಯೂಜಿಲೆಂಡ್)
* ಸ್ಮೃತಿ ಮಂಧಾನ – 4,681 (ಭಾರತ)
* ಹರ್ಮನ್‌ಪ್ರೀತ್ ಕೌರ್ – 4,231 (ಭಾರತ)
* ಚಮರಿ ಅಥಪತ್ತು 4,092 (ಶ್ರೀಲಂಕಾ)
* ಸೋಫಿ ಡಿವೈನ್ – 3,817 (ನ್ಯೂಜಿಲೆಂಡ್)

