ಹೈದರಾಬಾದ್: ಒಂದೇ ಕುಟುಂಬದ ಮೂವರಿಗೆ ಹಾವು ಕಚ್ಚಿದ್ದು, 3 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಮಹಬೂಬಾಬಾದ್ ಜಿಲ್ಲೆಯ ಶನಿಗಪುರಂನಲ್ಲಿ ನಡೆದಿದೆ.
ಒಂದೇ ಕುಟುಂಬದ ಮೂವರಿಗೆ ಹಾವು ಕಚ್ಚಿದ್ದು, 3 ತಿಂಗಳ ಮಗು ಸಾವನ್ನಪ್ಪಿದೆ. ಮಗುವಿನ ಪೆÇೀಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ‘ಅಪ್ಪು ಜೊತೆ ರಾಜ್ ಸಮಾಧಿ ನೋಡಲು ಬರ್ತಿದ್ದ ನಾವು ಈಗ ಅವರದ್ದೇ ಸಮಾಧಿ ನೋಡೋಕೆ ಬರುವಂಗಾಯ್ತು
ಕ್ರಾಂತಿ ಮತ್ತು ಮಮತಾ ದಂಪತಿಯ ಹೆಣ್ಣು ಮಗುವಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಖಮ್ಮಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ದಂಪತಿ ಮನೆಗೆ ಮರಳಿದ್ದರು. ಮಧ್ಯರಾತ್ರಿ ಮಗುವಿನ ಬಾಯಿಂದ ನೊರೆ ಬರುತ್ತಿರುವುದನ್ನು ಕಂಡ ಪೋಷಕರು ಆತಂಕಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ
ಮರುಘಳಿಗೆಯೇ ಮಗುವಿನ ಮೇಲೆ ಹೊದಿಸಿದ್ದ ಹೊದಿಕೆಯಿಂದ ಹಾವು ಬಿದ್ದಿದೆ. ಅದೇ ಹಾವು ಕ್ರಾಂತಿ ಮತ್ತು ಮಮತಾಗೂ ಕಚ್ಚಿದೆ. ಮೂವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿಮಧ್ಯೆ ಮಗು ಸಾವನ್ನಪ್ಪಿದೆ. ಕ್ರಾಂತಿ ಮತ್ತು ಮಮತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.