ಶ್ರೀನಗರ: ರಜೌರಿ (Rajouri) ಜಿಲ್ಲೆಯ ನೌಶೇರಾದ ಕಲ್ಸಿಯಾನ್ ಪ್ರದೇಶದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ (Pakistan) ಬುಧವಾರ ಸ್ನೈಪರ್ ಗುಂಡಿನ ದಾಳಿ ನಡೆಸಿದೆ. ಪರಿಣಾಮ ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ.
ಗೂರ್ಖಾ ರೆಜಿಮೆಂಟ್ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನ ಮೇಲೆ ಸ್ನೈಪರ್ ಗುಂಡಿನ ದಾಳಿ ನಡೆದಿದೆ. ತಕ್ಷಣವೇ ಅವರನ್ನು ಉಧಂಪುರದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭೂಸ್ವಾಧೀನ ಪರಿಹಾರ ನೀಡದ ಜಿಲ್ಲಾಡಳಿತ – ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ
ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಬಗ್ಗೆ ಎಚ್ಚರಿಕೆ ನೀಡಿದ್ದು, ನಿಯಂತ್ರಣ ರೇಖೆಯ ಉದ್ದಕ್ಕೂ ಪರಿಸ್ಥಿತಿಯನ್ನು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಮೆರಿಕದ ಮದ್ಯದ ಮೇಲೆ ಭಾರತ 150%, ಕೃಷಿ ಉತ್ಪನ್ನಗಳ ಮೇಲೆ 100% ತೆರಿಗೆ ವಿಧಿಸುತ್ತಿದೆ: ವೈಟ್‌ಹೌಸ್