ಹಿಮಪಾತಕ್ಕೆ ಸೇಬು ಬೆಳೆ ಹಾನಿ- ಸಂಚಾರ, ವಿದ್ಯುತ್ ಅಸ್ತವ್ಯಸ್ತ

Public TV
1 Min Read
Srinagar snowfall 2

-ಕ್ಯಾಂಡಲ್ ಬೆಳಕಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದ್ದು, ರಸ್ತೆ, ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಸೇಬು ಗಿಡಗಳ ಮೇಲೆ ಹಿಮ ಬಿದ್ದ ಪರಿಣಾಮ ಭಾರೀ ಹಾನಿ ಉಂಟಾಗಿದೆ.

ಬೃಹತ್ ಪ್ರಮಾಣದಲ್ಲಿ ಸೇಬು ಗಿಡಗಳು ಹಾಳಾಗಿವೆ. ಇದರಿಂದಾಗಿ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ ಅವರು ಇಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಸೇಬು ಬೆಳೆಗಾರರಿಗೆ ಆಗಿರುವ ನಷ್ಟವನ್ನು ಭರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ನವೆಂಬರ್ ಆರಂಭದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಹಿಮಪಾತ ಕಂಡು ಬಂದಿದೆ. ಇದೇ ರೀತಿ 2009, 2008 ಮತ್ತು 2004ರಲ್ಲಿ ಹಿಮಪಾತ ಸಂಭವಿಸಿತ್ತು ಅಂತ ಹವಾಮಾನ ಇಲಾಖೆ ತಿಳಿಸಿದೆ ಎಂದು ವರದಿಯಾಗಿದೆ.

ಕಾಶ್ಮೀರದ ಗುಲ್ಮರ್ಗ್ ಕನಿಷ್ಠ ಮೂರು ಡಿಗ್ರಿ ಸೆಲ್ಸಿಯಸ್ ಹಾಗೂ ಶ್ರೀನಗರದಲ್ಲಿ 1.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ವಿದ್ಯುತ್ ಕಡಿತವಾಗಿದ್ದು, ವಿದ್ಯಾರ್ಥಿಗಳು ಕ್ಯಾಂಡಲ್ ಬೆಳಕಿನಲ್ಲಿ ಪರೀಕ್ಷೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ಆಸ್ಪತ್ರೆಗಳಿಗೆ ವಿದ್ಯುತ್ ಕಡಿತದ ಬಿಸಿ ತಟ್ಟಿದೆ. ಹೀಗಾಗಿ ವಿದ್ಯುತ್ ದುರಸ್ತಿ ಕಾರ್ಯದಲ್ಲಿ 7 ಸಾವಿರ ಸಿಬ್ಬಂದಿ ತೊಡಗಿದ್ದಾರಂತೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *