ಬೆಂಗಳೂರು/ನೆಲಮಂಗಲ: ನರೇಗಾ ಕಾಮಗಾರಿ ನಡೆಸಿ ಅವ್ಯವಹಾರ ನಡೆಸುತ್ತಿರುವುದು ತಿಳಿದು ಸಾಮಾಜಿಕ ಹೋರಾಟಗಾರ ಧ್ವನಿ ಎತ್ತಿದ್ದಕ್ಕೆ ಅವರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸಂಕಿಘಟ್ಟ ಗ್ರಾಮದಲ್ಲಿ ನಡೆದಿದೆ.
Advertisement
ಸಂಕಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ನರೇಗಾ ಕಾಮಗಾರಿ ನಡೆಸಿ ಅವ್ಯವಹಾರ ನಡೆಸುತ್ತಿದ್ದರು. ಈ ಕುರಿತು ಪತ್ರಕರ್ತ, ಸಾಮಾಜಿಕ ಹೋರಾಟಗಾರ ದೇವೇಗೌಡ ಧ್ವನಿ ಎತ್ತಿ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದರು. ಇದಕ್ಕೆ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಸಹ ನೀಡಿದ್ದರು.ಇದನ್ನೂ ಓದಿ:ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್
Advertisement
ಇದಾದ ಬಳಿಕ ಸಂಕಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಾಯಣಪುರ ಸದಸ್ಯರು ದೇವೇಗೌಡರ ಬಳಿ ರಾಜಿ ಸಂಧಾನಕ್ಕೆ ಯತ್ನಿಸಿ ವಿಫಲವಾಗಿದ್ದರು. ಇದರಿಂದ ಕೋಪಗೊಂಡ ನಾರಾಯಣಪುರ ಗ್ರಾಮದ ಕೆಲ ಸದಸ್ಯರು ಹಾಗೂ ಅವರ ಬೆಂಬಲಿಗರು ದೇವೇಗೌಡ ಅವರ ಮೇಲೆ ಏಕಏಕಿ ದಾಳಿ ನಡೆಸಿದ್ದಾರೆ. ನರೇಗಾ ಕಾಮಗಾರಿಗಳ ಅವ್ಯವಹಾರದ ಬಗ್ಗೆ ನೀಡಿರುವ ಮನವಿ ಪತ್ರವನ್ನು ಹಿಂದಕ್ಕೆ ಪಡೆಯುವಂತೆ ಬೆದರಿಕೆಯನ್ನು ಹಾಕಿದ್ದಾರೆ.ಇದನ್ನೂ ಓದಿ:ಈ ಬಾರಿಯ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ಬಿ.ಸಿ.ಪಾಟೀಲ್
Advertisement
Advertisement
ಹಲ್ಲೆಗೊಳಗಾದ ದೇವೇಗೌಡರು ಸ್ಥಳೀಯರ ನೆರೆವಿನಿಂದ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಘಟನೆ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.ಇದನ್ನೂ ಓದಿ:KSRTC ಬಸ್ ತಡೆದು ವಿದ್ಯಾರ್ಥಿಗಳು, ಜನರಿಂದ ಪ್ರತಿಭಟನೆ