-ಡಿ.26ರವರೆಗೆ ನ್ಯಾಯಾಂಗ ಬಂಧನ
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ (Sodium Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನನ್ನು (Drone Prathap) ಡಿ.26ರವರೆಗೆ ನ್ಯಾಯಾಂಗ ಬಂಧನಕ್ಕೆ (Judicial Custody) ನೀಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.
ಮೂರು ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕಳೆದ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಪೊಲೀಸರು 5 ದಿನ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 3 ದಿನ ಕಸ್ಟಡಿಗೆ ಕೊಟ್ಟಿತ್ತು. ಅದರಂತೆ ಇಂದು ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ನನ್ನು ಮಧುಗಿರಿ ಉಪ ಕಾರಾಗ್ರಹಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗ | ಅಭಿವೃದ್ಧಿ ಕಾರ್ಯ ಸಹಿಸದೆ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ
ಉಳಿದಂತೆ ಡ್ರೋನ್ ಪ್ರತಾಪ್ಗೆ ಸಹಕರಿಸಿದ ಇನ್ನೂ ಮೂವರ ಮೇಲೂ ಎಫ್ಐಆರ್ ದಾಖಲಾಗಿತ್ತು. ಕ್ಯಾಮೆರಾ ಮ್ಯಾನ್ ವಿನಯ್, ಸೋಡಿಯಂ ಕೊಡಿಸಿದ ಪ್ರಜ್ವಲ್ ಹಾಗೂ ಫಾರಂ ಹೌಸ್ ಮಾಲೀಕ ಜಿತೇಂದ್ರ ಜೈನ್ ಮೇಲೂ ಕೇಸ್ ಆಗಿತ್ತು. ಆದರೆ ಪ್ರಜ್ವಲ್ ಮತ್ತು ವಿನಯ್ ನನ್ನು ಬಂಧಿಸಿದ ಪೊಲೀಸರು ವಿಚಾರಣೆ ಮಾಡಿ ಭಾನುವಾರ ರಾತ್ರಿ ಬಿಟ್ಟು ಕಳುಹಿಸಿದ್ದಾರೆ. ಘಟನೆಯಲ್ಲಿ ಅವರ ಪ್ರಮುಖ ಪಾತ್ರ ಇಲ್ಲದ್ದರಿಂದ ವಿಚಾರಣೆ ಮಾಡಿ ಕಳುಹಿಸಲಾಗಿದೆ. ಉಳಿದಂತೆ ಕೃಷಿ ಹೊಂಡದ ಮಾಲೀಕ ಜಿತೇಂದ್ರ ಜೈನ್ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗೆಳೆಯನ ಮದುವೆ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ಯುವಕ ಕುಸಿದು ಬಿದ್ದು ಸಾವು – ವೀಡಿಯೋ ವೈರಲ್