ಮಡಿಕೇರಿ: ಸಾಫ್ಟ್‌ವೇರ್ ಎಂಜಿನಿಯರ್ (Software Engineer) ಒಬ್ಬರು ಮಡಿಕೇರಿಯ (Madikeri) ಲಾಡ್ಜ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರಿನ (Bengaluru) ಸಂದೇಶ್ (35) ಎಂದು ಗುರುತಿಸಲಾಗಿದೆ. ರೂಮ್‍ನ ಕಿಟಕಿಯ ಸರಳಿಗೆ ಬಟ್ಟೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಅವರು ಕಳೆದ 2 ದಿನಗಳಿಂದ ಹೊಟೆಲ್‍ನಲ್ಲಿ ತಂಗಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮದ್ವೆಯಾಗಲು ಯಾರೂ ಹೆಣ್ಣು ಕೊಡ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ
- Advertisement
ಇಂದು (ಮಂಗಳವಾರ) ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ಕೋಣೆಯಲ್ಲಿ ಡೆತ್‍ನೋಟ್ ಕೂಡಾ ಸಿಕ್ಕಿದೆ. ಅದರಲ್ಲಿ ನನ್ನ ಸಾವಿಗೆ ಯಾರೂ ಕಾರಣರಲ್ಲ, ಎಲ್ಲರಿಗೂ ಗುಡ್ ಬೈ, ಯಾರೂ ಬೇಸರ ಮಾಡಬಾರದು ಎಂದು ಬರೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸ್ ಮೂಲಗಳು ನೀಡಿವೆ.
- Advertisement
ಈ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: ರಾಮಮಂದಿರದ ಅಕ್ಷತೆ ಹಂಚಲು ಹೋದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ