ಹುಬ್ಬಳ್ಳಿ: ಚೀನಾದಿಂದ ಆಗಮಿಸಿದ ಹುಬ್ಬಳ್ಳಿ ಮೂಲದ ಟೆಕ್ಕಿಗೆ ಕೊರೊನಾ ವೈರಸ್ ಇಲ್ಲವೆಂದು ವೈದ್ಯಕೀಯ ವರದಿ ದೃಢಪಡಿಸಿದೆ.
ಸಾಫ್ಟ್‌ವೇರ್ ಎಂಜಿನಿಯರ್ ಸಂದೀಪ್‍ಗೆ ಕೊರೊನಾ ಸೊಂಕು ಶಂಕೆ ಹಿನ್ನೆಲೆಯಲ್ಲಿ ಕಿಮ್ಸ್‌ನ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಂದೀಪ್ ರಕ್ತದ ಮಾದರಿಯನ್ನು ಬೆಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿಂದ ಇದೀಗ ಕೊರೊನಾ ನೆಗೆಟಿವ್ ಎಂದು ವರದಿ ಬಂದಿದ್ದು ಕೊರೊನಾ ಭೀತಿ ಇಲ್ಲವೆಂದು ಸ್ಪಷ್ಟವಾಗಿದೆ. ಇದನ್ನೂ ಓದಿ: ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತೆ? ರೋಗ ಲಕ್ಷಣವೇನು?
Advertisement
Advertisement
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಕಿಮ್ಸ್ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹುಬ್ಬಳ್ಳಿ ಜನರು ಮತ್ತು ವೈದ್ಯರು ನಿಟ್ಟುಸಿರು ಬಿಟ್ಟಿದ್ದಾರೆ.
Advertisement
ಕೇಶ್ವಾಪುರದ ಸಂದೀಪ್ ಚೀನಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಜನವರಿ 19ರಂದು ಬೆಂಗಳೂರಿಗೆ ಆಗಮಿಸಿದ್ದು, ಕಳೆದ 15 ದಿನಗಳ ಹಿಂದೆ ಹುಬ್ಬಳ್ಳಿಗೆ ಬಂದಿದ್ದಾರೆ. ಸೋಮವಾರ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಚೀನಾದಿಂದ ಆಗಮಿಸಿದ ಹಿನ್ನೆಲೆಯಲ್ಲಿ ಕೊರೊನಾ ಶಂಕೆ ವ್ಯಕ್ತಪಡಿಸಿ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ನಂತರ ಅದನ್ನು ಬ್ಲಡ್ ಮತ್ತು ಸ್ಟ್ರಾಬ್ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಪ್ ವೈರಾಜಲಿ ಬೆಂಗಳೂರಿಗೆ ರವಾನಿಸಲಾಗಿತ್ತು.