ಹೈದರಾಬಾದ್: ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿ ಮಹಿಳೆ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.
ಸ್ವಾರ್ತಿ ಕುಸುಮಾ (32)ಮೃತಳಾಗಿದ್ದಾಳೆ. ಈಕೆ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದಳು. ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಕೊಂಡು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
Advertisement
ಸ್ವಾರ್ತಿ ಕುಸುಮಾ, ಪತಿ ಸಾಯಿಕುಮಾರ್ ಇಬ್ಬರೂ ಕೊರೊನಾ ಸಮಯದಲ್ಲಿ ಸಾಫ್ಟ್ ವೇರ್ ಉದ್ಯೋಗ ಕಳೆದುಕೊಂಡಿದ್ದರು. ಕೆಲಸ ಕಳೆದುಕೊಂಡ ನಂತರ ಸಾಯಿಕುಮಾರ್ ಕಾಲ್ ಸೆಂಟರ್‌ನಲ್ಲಿ ಕಡಿಮೆ ಸಂಬಳಕ್ಕೆ ಸೇರಿಕೊಂಡಿದ್ದರು. ಸ್ವಾತಿ ಅವರು ಮನೆಯಲ್ಲೇ ಇದ್ದರು. ಇದನ್ನೂ ಓದಿ: ಅಪ್ಪನಂತೆ ನಾನೂ ವಾಯುಪಡೆ ಸೇರ್ತೀನಿ: ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ವಿಂಗ್ ಕಮಾಂಡರ್ ಪುತ್ರಿ ಆಸೆ
Advertisement
Advertisement
ಪತಿ ಸಾಯಿಕುಮಾರ್‌ಗೆ ಬರುತ್ತಿದ್ದ ಸಂಬಳ ಮಕ್ಕಳ ಫೀಸಿಗೂ ಸಾಕಾಗುತ್ತಿಲ್ಲವೆಂದು ಸ್ವಾತಿ ಚಿಂತಿತರಾಗಿದ್ದರು ಎನ್ನಲಾಗಿದೆ. ಸಾಯಿಕುಮಾರ್ ಕೆಲಸಕ್ಕೆ ತೆರಳಿದ್ದ ವೇಳೆ ಬೆಡ್ ರೂಮಿನಲ್ಲಿ ಆತ್ಮಹತ್ಯೆ ನೋಟ್ ಬರೆದು ಸ್ವಾತಿ 5 ವರ್ಷದ ಮಗ ಮಗು 3 ವರ್ಷದ ಮಗಳನ್ನು ಕೊಂದು ತಾವೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಪ್ರಧಾನಿಗೆ ಭಗವದ್ಗೀತೆ ಗಿಫ್ಟ್ ಕೊಟ್ಟ ಐರಾವತ ನಟಿ