ಬೆಂಗಳೂರು: ಕಾಂಬೋಡಿಯದಲ್ಲಿ (Cambodia) ವಿದೇಶಿ ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಅಪಾಯದಲ್ಲಿರುವ ತೀರ್ಥಹಳ್ಳಿ ಪಟ್ಟಣದ ಸಾಫ್ಟ್‌ವೇರ್ ಇಂಜಿನಿಯರ್ ಕಿರಣ್ ಶೆಟ್ಟಿ ಅವರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ, ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು, ಕೇಂದ್ರದ ವಿದೇಶಾಂಗ ಸಚಿವಾಲಯ ಅಧಿಕಾರಿಗಳ ಜತೆ ಸತತ ಪ್ರಯತ್ನ ನಡೆಸಿದ್ದಾರೆ.
ಥೈಲ್ಯಾಂಡ್ ದೇಶದಲ್ಲಿ ಹೆಚ್ಚಿನ ಸಂಬಳ ದೊರಕಿಸಿಕೊಡುವ ಆಮಿಷ ಒಡ್ಡಿದ ನೇಮಕಾತಿ ಏಜೆನ್ಸಿಯಿಂದ ಮೊಸಹೋಗಿ, ಕಾಂಬೋಡಿಯಾ ದೇಶದಲ್ಲಿ ಖಾಸಗಿ ಸಂಸ್ಥೆಯೊಂದರ ವಶದಲ್ಲಿರುವ ತೀರ್ಥಹಳ್ಳಿ ನಿವಾಸಿಯ ಬಿಡುಗಡೆ ಬಗ್ಗೆ ಸತತ ಪ್ರಯತ್ನ ನಡೆಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ (Pralhad Joshi) ಹಾಗೂ ವಿದೇಶಾಂಗ ರಾಜ್ಯ ಸಚಿವ ವಿ.ಮುರಳೀಧರ್ ಅವರ ಕಚೇರಿ ಜತೆ ಸಂಪರ್ಕಿಸಿ, ಬಿಡುಗಡೆ ಕುರಿತು ಮನವಿ ಮಾಡಿದ್ದಾರೆ. ಇದನ್ನೂ ಓದಿ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ
Advertisement
Advertisement
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೂ ಟೆಕ್ಕಿಯ ಸುರಕ್ಷಾ ಹಿಂದುವರಿಕೆ ಬಗ್ಗೆ ಸಚಿವರು ಚರ್ಚಿಸಿದ್ದು, ತಮ್ಮ ಎಲ್ಲಾ ಕೈಲಾದ ಪ್ರಯತ್ನ ಮಾಡಲಾಗುತ್ತಿದೆ. ಪೋಷಕರು ಧೈರ್ಯಗುಂದಬಾರದು ಎಂದು ಸಾಂತ್ವನ ಹೇಳಿದ್ದಾರೆ.
Advertisement
ಸಾಫ್ಟ್‌ವೇರ್ ಇಂಜಿನಿಯರ್ ಕಿರಣ್ ಶೆಟ್ಟಿ ಅವರನ್ನು ದುಷ್ಕರ್ಮಿಗಳಿಂದ ಬಿಡಿಸಿ ಕೊಡುವಂತೆ ಅವರ ಸಹೋದರ ಪವನ್ ಶೆಟ್ಟಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪರ್ಕಿಸಿ ಮನವಿ ಮಾಡಿದ್ದರು. ಕಿರಣ್ ಶೆಟ್ಟಿ ಅವರಿಗೆ ನಾಲ್ಕು ತಿಂಗಳ ಮಗು ಹಾಗೂ ಪತ್ನಿಯಿದ್ದು, ತೀರ್ಥಹಳ್ಳಿಯಲ್ಲಿ ಆತಂಕದಿಂದ ಪತಿಯ ಮರಳಿಕೆ ಬಗ್ಗೆ ಚಿಂತಿತರಾಗಿದ್ದಾರೆ. ಇದನ್ನೂ ಓದಿ: ಕಿಡ್ನಿ ಮಾರಿ ದುಡ್ಡು ಕೊಡ್ತೀನಿ.. ನಮ್ಮ ನಾಯಕರಿಗೆ ಟಿಕೆಟ್ ಕೊಡಿ – ಯುವಕನ ಹುಚ್ಚಾಟ
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k