ಬೆಂಗಳೂರು: ಕೇತುಗ್ರಸ್ಥ ಸೂರ್ಯಗ್ರಹಣದ (Solar eclipse) ಎಫೆಕ್ಟ್ ಕೇವಲ ರಾಶಿಗಳ ಮೇಲೆ ಮಾತ್ರ ಅಲ್ಲ, ಇತ್ತ ಹಲವು ವಲಯಗಳ ಮೇಲೂ ಕೂಡ ಪರಿಣಾಮ ಬೀರಿದೆ. ಪ್ರತಿನಿತ್ಯ ಜನರಿಂದ ತುಂಬಿ ತುಳುಕುತ್ತಿದ್ದ ಜಾಗಗಳು ಗ್ರಹಣದ ಎಫೆಕ್ಟ್‌ನಿಂದ ಬಿಕೋ ಅಂತಿವೆ.
Advertisement
ಹೌದು ಕೇತುಗ್ರಸ್ಥ ಸೂರ್ಯಗ್ರಹಣ ಎಫೆಕ್ಟ್ ರಾಶಿಗಳ ಮೇಲೆ ಸಾಕಷ್ಟು ಪರಿಣಾಮ ಬೀರವು ಬಗ್ಗೆ ಹಲವು ಶಾಸ್ತ್ರ ತಜ್ಞರು ಅಭಿಪ್ರಾಯ ಪಟ್ಟಿದ್ದರು. ಆದರೆ ಗ್ರಹಣದ ಎಫೆಕ್ಟ್ ಕೇವಲ ರಾಶಿಗಳಿಗಷ್ಟೇ ಸೀಮಿತವಾಗದೇ, ಬದಲಾಗಿ ಪ್ರತಿನಿತ್ಯ ಚಟುವಟಿಕೆಯಿಂದ ಕೂಡಿರುತ್ತಿದ್ದ ಅನೇಕ ಕಡೆಗೂ ತಟ್ಟಿದೆ. ಗ್ರಹಣದ ಹಿನ್ನೆಲೆ ನಗರದಲ್ಲಿ ಜನರ ಓಡಾಟ ಹಲವೆಡೆ ವಿರಳವಾಗಿದ್ದ ಕಾರಣ ಬಹುತೇಕ ಜನನಿಬಿಡ ಪ್ರದೇಶಗಳು ನಿಶ್ಯಬ್ದವಾಗಿದೆ ಇದನ್ನೂ ಓದಿ: ಅಪಾರ್ಟ್‍ಮೆಂಟ್ ಕಿಟಕಿಗಳಿಗೆ ರಾಕೆಟ್ ಬಿಟ್ಟ ಕಿಡಿಗೇಡಿ – ವೀಡಿಯೋ ವೈರಲ್
Advertisement
Advertisement
ಬೆಂಗಳೂರಿನ ಸಂಚಾರ ನಾಡಿಗೂ ಗ್ರಹಣದ ಎಫೆಕ್ಟ್ ಜೋರಾಗಿಯೇ ತಟ್ಟಿದೆ. ಪ್ರತಿನಿತ್ಯ ಲಕ್ಷಾಂತರ ಜನ ಬಳಸುವ ಬಿಎಂಟಿಸಿ ಇಂದು ಖಾಲಿ, ಖಾಲಿ ಓಡಾಡುತ್ತಿದ್ದ ದೃಶ್ಯಗಳಂತು ಸಾಮಾನ್ಯವಾಗಿತ್ತು. ಹೋಟೆಲ್‍ಗಳ ಕಥೆಯು ಇದಕ್ಕೇನು ಹೊರತಾಗಿಲ್ಲ. ಗ್ರಹಣದ ನಡುವೆಯೂ ಹಲವರು ಬೆಳಗ್ಗೆಯೇ ಹೋಟೆಲ್‍ಗಳನ್ನ ತೆರೆದಿದ್ದರೂ, ಜನ ಮಾತ್ರ ಹೊಟೇಲ್ ನತ್ತ ಮುಖ ಮಾಡಿಲ್ಲ. ಗ್ರಹಣದ ಎಫೆಕ್ಟ್ ಬಗ್ಗೆ ಮುಂಚೆಯೇ ಯೋಚಿಸಿದ್ದ ಕೆಲ ಹೊಟೇಲ್‍ನವರು ಇತರೆ ದಿನಕ್ಕಿಂತ ಕಡಿಮೆ ಆಹಾರ ಸಿದ್ದತೆ ಮಾಡಿಸಿದರು. ವ್ಯಾಪಾರವಾಗದ ಕಾರಣ ಹೊಟೇಲ್ ಅನ್ನು ಬಂದ್ ಮಾಡಿ ಮನೆಗೆ ಹೋಗುವಂತಾಯಿತು.
Advertisement
ಈ ಗ್ರಹಣದ ಎಫೆಕ್ಟ್ ಈ ಹೋಟೆಲ್, ಬಸ್ ಸೇರಿದಂತೆ ಕೇವಲ ವ್ಯಾಪಾರ ಸ್ಥಳಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ. ಬದಲಾಗಿ, ಸರ್ಕಾರಿ ಕಚೇರಿಗಳಿಗೂ ತಟ್ಟಿತ್ತು. ನೌಕರರಿಂದ ತುಂಬಿ ತುಳುಕುತ್ತಿದ್ದ ವಿಧಾನಸೌಧ ಕೂಡು ಇಂದು ಖಾಲಿ, ಖಾಲಿ. ಸಾಲು, ಸಾಲು ರಜೆ ಹಿನ್ನೆಲೆ ಇಂದು ಕೂಡ ನೌಕರರು ರಜೆ ಹಾಕಿಕೊಂಡಿದ್ದ ಕಾರಣ ವಿಧಾನಸೌಧ ಬಿಕೋ ಎನ್ನುತ್ತಿದೆ.
ಒಟ್ಟಾರೆ ಸರ್ಕಾರಿ ಕಚೇರಿಯಿಂದ ಬಿಎಂಟಿಸಿ ಸವಾರರವರೆಗೂ ಗ್ರಹಣದ ಬಿಸಿ ಜೋರಾಗಿಯೇ ಇತ್ತು. ಹಬ್ಬದ ಸಂಭ್ರಮದ ನಡುವೆ ಗ್ರಹಣ ಭೀತಿಯು ಜನರನ್ನು ಸೈಲೆಂಟ್ ಆಗಿಸಿದ್ದು ಸುಳ್ಳಲ್ಲ. ಇದನ್ನೂ ಓದಿ: ಸ್ವತಃ ಬಿಜೆಪಿಯವರೇ ಹಲಾಲ್ ಕಟ್ ಮಾಡಿ ಕಮಿಷನ್ ಹೊಡೆಯುತ್ತಿದ್ದಾರೆ – ಓವೈಸಿ ಆರೋಪ