ತಿರುವನಂತಪುರಂ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬಹುಕೋಟಿ ಸೋಲಾರ್ ಹಗರಣದಲ್ಲಿ ಏಕಕಾಲಕ್ಕೆ ಭ್ರಷ್ಟಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಲು ಕೇರಳ ಸರ್ಕಾರ ಚಿಂತನೆ ನಡೆಸಿದೆ.
ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ 2013ರ ಜುಲೈನಲ್ಲಿ ಜೈಲಿನಿಂದಲೇ ಒಂದು ಪತ್ರ ಬರೆದಿದ್ದರು. ಆ ಪತ್ರವನ್ನು ಆಧರಿಸಿ ರಾಜ್ಯದ ಪ್ರಮಖ ರಾಜಕೀಯ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ.
Advertisement
ಈ ವಿಚಾರದ ಬಗ್ಗೆ ತಿರುವನಂತಪುರಂನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್, ಸರಿತಾ ನಾಯರ್ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆದಿದೆ. ಹೀಗಾಗಿ ಸರಿತಾ ನಾಯರ್ ಪತ್ರದಲ್ಲಿ ಯಾರ ಹೆಸರನ್ನು ಬರೆದಿದ್ದಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
Advertisement
ಕೇರಳ ಸಿಎಂ ಪಿಣರಾಯ್ ವಿಜಯನ್ ನೇತೃತ್ವದ ಎಡಪಕ್ಷಗಳ ಒಕ್ಕೂಟದ ಸರ್ಕಾರಕ್ಕೆ ಸೋಲಾರ್ ತನಿಖಾ ಆಯೋಗದ ವರದಿ ಬಂದಿದ್ದು, ಆರೋಪಿ ಸರಿತಾ ಪತ್ರದಲ್ಲಿ ಉಲ್ಲೇಖ ಮಾಡಿರುವ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಬಹುದು ಎಂದು ಹೇಳಿದೆ. ಲೈಂಗಿಕ ಬಯಕೆ ಈಡೇರಿಸುವಂತೆ ಬೇಡಿಕೆ ಇಡುವುದು ಭ್ರಷ್ಟಾಚಾರದ ಭಾಗವೆಂದು ಪರಿಗಣಿಸಲಾಗಿದೆ. ವರದಿಯನ್ನೇ ಆಧರಿಸಿ ಕಾಂಗ್ರೆಸ್‍ಗೆ ಶಾಕ್ ನೀಡಲು ಕೇರಳದ ಎಡಪಕ್ಷಗಳ ಸರ್ಕಾರ ಮುಂದಾಗಿದೆ.
Advertisement
ಮಾಧ್ಯಮಗಳಿಗೆ ಸೋರಿಕೆಯಾಗಿರುವ ಮಾಹಿತಿ ಪ್ರಕಾರ ಮಾಜಿ ಸರಿತಾ ನಾಯರ್ ಪತ್ರದಲ್ಲಿ, ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಸಂಸದ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆಗಿರುವ ವೇಣುಗೋಪಾಲ್, ಹೈಬಿ ಈಡನ್, ಅರ್ಯಾಡನ್ ಮೊಹಮ್ಮದ್, ಅಡೂರ್ ಪ್ರಕಾಶ್, ಲೋಕಸಭಾ ಸಂಸದ ಜೋಸ್ ಕೆ ಮನಿ, ಕೆಪಿ ಅನಿಲ್ ಕುಮಾರ್ ಹೆಸರು ಇದೆ.
Advertisement
Criminal case will be registered & fresh inquiry will be conducted under anti-corruption law: Kerala CM Pinarayi Vijayan on solar scam pic.twitter.com/vciaf8DWd4
— ANI (@ANI) October 11, 2017
Solar scam inquiry commission finds, former CM Oommen Chandy & his office were involved in solar scam: Kerala CM Pinarayi Vijayan pic.twitter.com/xi5nkkXEfZ
— ANI (@ANI) October 11, 2017