ಬಳ್ಳಾರಿ: ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ಯೋಧರೊಬ್ಬರು ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ನಿವಾಸಿ ಹಾಲಪ್ಪ ಮೃತ ಯೋಧ ರಜೆ ತೆಗೆದುಕೊಂಡು ಸೋಮವಾರ ಗ್ರಾಮಕ್ಕೆ ಆಗಮಿಸಿದ್ದ ಹಾಲಪ್ಪ ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಯೋಧ ಹಾಲಪ್ಪ ಅವರ ಅಂತ್ಯಕ್ರಿಯೆಯನ್ನು ನಡೆಸಲಾಯಿತು. ಅಂತ್ಯಕ್ರಿಯೆಗೂ ಮುನ್ನ ಮೃತ ಯೋಧನ ಶರೀರವನ್ನು ಗ್ರಾಮದ ತುಂಬೆಲ್ಲಾ ಮೆರವಣಿಗೆ ಮಾಡಲಾಯಿತು. ಯೋಧನ ಅಂತ್ಯಕ್ರಿಯೆಗೆ ಸಾವಿರಾರು ಜನ ಆಗಮಿಸಿ ನಮನ ಸಲ್ಲಿಸುವ ಮೂಲಕ ಯೋಧ ಹಾಲಪ್ಪ ಅವರಿಗೆ ಗೌರವ ಸಲ್ಲಿಸಿದರು.