ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ಕಿಶ್ತ್ವಾರ್‌ನಲ್ಲಿ ಗುರುವಾರ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.
ಕಾರ್ಯಾಚರಣೆಯ ಸಮಯದಲ್ಲಿ ಭೀಕರ ಗುಂಡಿನ ಚಕಮಕಿ ನಡೆಯಿತು. ನಮ್ಮ ಧೈರ್ಯಶಾಲಿಗಳಲ್ಲಿ ಒಬ್ಬರು ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ
Op Trashi
Contact has been established with #terrorists during a joint #operation with @JmuKmrPolice at #Chhatru, #Kishtwar today morning.
Additional troops have been inducted, and operations are ongoing to neutralize the terrorists.@adgpi@NorthernComd_IA
— White Knight Corps (@Whiteknight_IA) May 22, 2025
ಕಣಿವೆಯಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ನಾಲ್ವರು ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪಿನ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಜಂಟಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು (CASO) ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರನ್ನು ಎದುರಿಸಲು ಮತ್ತು ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗದಂತೆ ನೋಡಿಕೊಳ್ಳಲು ಸೇನೆಯನ್ನು ಸಜ್ಜುಗೊಳಿಸಲಾಗಿದೆ. ಜಂಟಿ ಪಡೆಗಳು ಹತ್ತಿರವಾಗುತ್ತಿದ್ದಂತೆ ಅಡಗಿಕೊಂಡಿದ್ದ ಭಯೋತ್ಪಾದಕರು ಗುಂಡು ಹಾರಿಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು. ಮೂರರಿಂದ ನಾಲ್ಕು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಾನು ಶಾಂತವಾಗಿದ್ದರೂ ನನ್ನ ರಕ್ತ ನಾಳಗಳಲ್ಲಿ ʻಸಿಂಧೂರʼ ಕುದಿಯುತ್ತಲೇ ಇರುತ್ತೆ – ಪಾಕ್‌ಗೆ ಮೋದಿ ಖಡಕ್ ಸಂದೇಶ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು, ಭೂಗತ ಪಾತಕಿಗಳು ಮತ್ತು ಸಹಾನುಭೂತಿ ಹೊಂದಿರುವವರ ವಿರುದ್ಧ ಜಂಟಿ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.