ಬಳ್ಳಾರಿ: ರಜೆಗೆಂದು ಬಂದಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲಗೋಡು ಗ್ರಾಮದಲ್ಲಿ ನಡೆದಿದೆ.
ಮೌನೇಶ್ ಬಡಿಗೇರ (26) ಮೃತ ಯೋದ. ಇವರು ಕಳೆದ 9 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆರು ತಿಂಗಳಿಂದ ಕಾಶ್ಮೀರದ ನೌಸೇರಾ ಸೆಕ್ಟರ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಒಂದು ವಾರದ ಹಿಂದೆ ಅಷ್ಟೇ ರಜೆಗೆಂದು ಮೌನೇಶ್ ಬಡಿಗೇರ ಅವರು ಸ್ವಗ್ರಾಮಕ್ಕೆ ಬಂದಿದ್ದರು.
ಶನಿವಾರ ಹೊಸಪೇಟೆಗೆ ಹೋಗಿದ್ದರು. ಆದರೆ ರಾತ್ರಿ ಹೊಸಪೇಟೆಯಿಂದ ಚಿಲಗೋಡು ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಆಕಸ್ಮಿಕವಾಗಿ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಸ್ಥಳದಲ್ಲಿಯೇ ಮೌನೇಶ್ ಬಡಿಗೇರ ಮೃತಪಟ್ಟಿದ್ದಾರೆ.
ಇಂದು ಸ್ವ ಗ್ರಾಮದಲ್ಲಿ ಅವರ ಅಂತ್ಯಸಂಸ್ಕಾರ ನಡೆದಿದೆ. ಸಾವಿರಾರು ಜನರು ಮೌನೇಶ್ ಬಡಿಗೇರ ಅವರ ಪಾರ್ಥಿವ ಶರೀರವನ್ನು ಗ್ರಾಮದಲ್ಲಿ ಮೆರವಣಿಗೆ ಮಾಡುವ ಮೂಲಕ ಸೇನಾ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ಮಾಡಲಾಗಿದೆ.