ಬೆಳಗಾವಿ: 8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ (Soldier) ರೈಲಿನಿಂದ (Train) ಕಾಲು ಜಾರಿ ಬಿದ್ದು ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.
ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ಕನಸಗೇರಿ (Kanasageri) ಗ್ರಾಮದ ವೀರ ಯೋಧರಾಗಿದ್ದು, ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದರು. ಮದುವೆಗೆಂದು (Marriage) ಪಂಜಾಬ್‌ನಿಂದ (Punjab) ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು
ಯೋಧನ ಸಾವಿನಿಂದ ಸ್ವಗ್ರಾಮ ಕನಸಗೇರಿಯಲ್ಲಿ ಸ್ಮಶಾನ ಮೌನ ಆವರಿಸಿದ್ದು, ದುಃಖ ಮಡುಗಟ್ಟಿದೆ. ಮೃತ ಯೋಧನ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮ ಕನಸಗೇರಿಗೆ ಆಗಮಿಸಲಿದೆ. ಇದನ್ನೂ ಓದಿ: ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟ ಹಣ್ಣು ತಿಂದು ಯುವತಿ ಸಾವು!