ಚಿಕ್ಕೋಡಿ (ಬೆಳಗಾವಿ): ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ (Soldier Wife) ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ((Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.
ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡವರು. ಮೃತಳ ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅತ್ತೆ ಸೇವಂತಾ ಸಿದರಾಯ ರೂಪನವರ ಅವರಿಂದ ರೂಪಾಬಾಯಿ ದಿನಂಪ್ರತಿ ಕಿರಿಕಿರಿ ಅನುಭವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದ ಮನನೊಂದು ಅವರು ಆತ್ಮಹತ್ಯೆ ದಾರಿ ಹಿಡಿದಿರುವುದಾಗಿ ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ರೂಪಾಬಾಯಿ ಪತಿ ಹಾಗೂ ತನ್ನ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಿಯಾಸಿ ಬಸ್ ಮೇಲೆ ದಾಳಿ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು