ಮಾಸ್ಕ್: ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ತನ್ನ ರಾಷ್ಟ್ರ ಧ್ವಜವನ್ನು ಉಕ್ರೇನ್ನಲ್ಲಿರುವ ಕಾಖೋವ್ಕಾ ಜಲವಿದ್ಯುತ್ ಸ್ಥಾವರದ ಮೇಲೆ ಹಾರಿಸಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ.
ಉಕ್ರೇನ್ನ ಕಾಖೋವ್ಕಾದಲ್ಲಿರುವ ಡ್ನೀಪರ್ ನದಿಗೆ ಅಡ್ಡಲಾಗಿ ಡ್ಯಾಮ್ ಕಟ್ಟಿ ಜಲ ವಿದ್ಯತ್ ಸ್ಥಾವರವನ್ನು ಸ್ಥಾಪಿಸಿತ್ತು. ಈ ವಿದ್ಯುತ್ ಸ್ಥಾವರದಿಂದ ಉಕ್ರೇನ್ನ ಸಾಕಷ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತಿತ್ತು. ಇದೀಗ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ಮಿಲಿಟರಿ ಪಡೆ ಪವರ್ ಪ್ಲಾಂಟ್ ವಶಪಡಿಸಿಕೊಂಡು ರಷ್ಯಾದ ರಾಷ್ಟ್ರ ಧ್ವಜವನ್ನು ಹಾರಿಸಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್ಗೆ ಉಕ್ರೇನ್ ಕರೆ!
ಈಗಾಗಲೇ ರಷ್ಯಾ, ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದು, ಬಾಂಬ್ ಮತ್ತು ಇತರ ಯುದ್ಧೋಪಕರಣಗಳೊಂದಿಗೆ ರಷ್ಯಾದ ಮಿಲಿಟರಿ ಪಡೆ ಕಾಖೋವ್ಕಾದ ನಗರ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಉಕ್ರೇನ್ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
Russian soldiers have raised the Russian flag over the Kakhovka hydroelectric power plant. https://t.co/pg8P0BlMZd pic.twitter.com/tQv4KhUwBG
— Rob Lee (@RALee85) February 24, 2022
ತಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದಿಂದಾಗಿ ಇದುವರೆಗೆ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ 137 ಮಂದಿ ಹತರಾಗಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಬಿಡುಗಡೆ ಮಾಡಿದ ವೀಡಿಯೋದಲ್ಲಿ ಈ ಯುದ್ಧದ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ಮೃತರನ್ನು ಹೀರೋಗಳು ಎಂದು ಕರೆದಿದ್ದಾರೆ. ರಷ್ಯಾ ದಾಳಿ ಪರಿಣಾಮವಾಗಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.