ಮುಂದಿನ ಮುಖ್ಯಮಂತ್ರಿ ಸೋಮಣ್ಣ – ಘೋಷಣೆ ಕೂಗಿದ ಅಭಿಮಾನಿಗಳು

Public TV
1 Min Read
somanna

– ನಿನ್ನ ನಂಬಿ ಬಂದಿದ್ದೇನೆ.. ದಯಮಾಡಿ ಕೈಬಿಡಬೇಡ: ಕಾಪುಗೆ ಸೋಮಣ್ಣ ಮನವಿ

ಮೈಸೂರು: ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಸ್ಪರ್ಧೆಗೆ ಸಜ್ಜಾಗಿರುವ ವಿ.ಸೋಮಣ್ಣ (Somanna) ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ್ದಾರೆ. “ಮುಂದಿನ ಮುಖ್ಯಮಂತ್ರಿ ಸೋಮಣ್ಣ” ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

kapu siddalinga swamy somanna

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿ ಬರುವಂತೆ ಬಿಜೆಪಿ ಹೈಕಮಾಂಡ್‌ ಸೂಚಿಸಿದ ಬೆನ್ನಲ್ಲೇ ಸಚಿವ ವಿ.ಸೋಮಣ್ಣ ಅವರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಚಾರಕ್ಕೂ ಮುನ್ನ ಬಿ.ಎಸ್.ಯಡಿಯೂರಪ್ಪ (Yediyurappa) ಆಪ್ತ ಕಾಪು ಸಿದ್ದಲಿಂಗಸ್ವಾಮಿ (Kapu Siddalingaswamy) ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ “ಮುಂದಿನ ಮುಖ್ಯಮಂತ್ರಿ ಸೋಮಣ್ಣ” ಎಂದು ಅಭಿಮಾನಿಗಳು ಘೋಷಣೆ ಕೂಗಿದರು. ಇದನ್ನೂ ಓದಿ: ಎಂಪಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ

ಕಾಪು ಮನೆಗೆ ಭೇಟಿ ನೀಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. “ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ” ಎಂದು ಕಾಪು ಸಿದ್ದಲಿಂಗಸ್ವಾಮಿಗೆ ಕೈ ಮುಗಿದು ಸೋಮಣ್ಣ ಮನವಿ ಮಾಡಿದರು. ಸೋಮಣ್ಣ ಅವರಿಗೆ ಒಳೇಟಿನ ಭಯ ಕಾಡುತ್ತಿದೆ ಎನ್ನಲಾಗುತ್ತಿದೆ.

ಕಾಪು ಸಿದ್ಧಲಿಂಗಸ್ವಾಮಿ ಯಡಿಯೂರಪ್ಪರ ಆಪ್ತ. ವರುಣಾ ಕ್ಷೇತ್ರಕ್ಕೆ ಕಾಪು ಸಿದ್ಧಲಿಂಗಸ್ವಾಮಿ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಅವರಿಗೆ ಟಿಕೆಟ್‌ ಕೊಡಲಾಗಿದೆ. ಇದನ್ನೂ ಓದಿ: ಸಮಾಜದ ಮುಖಂಡರ ಕಡೆಗಣನೆ – ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಶ್ರೀ ಕಿಡಿ

Share This Article