ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Vidhanasabha Election) ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಸೋಲು ಕಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ಆರಂಭಿಸಿದ್ದು, ಈ ಸಂಬಂಧ ಹೈಕಮಾಂಡ್ ಚರ್ಚಿಸಲು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಬುಧವಾರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಭೇಟಿಯಾಗುವ ಸಾಧ್ಯತೆಗಳಿದೆ.
Advertisement
ಸೋಮವಾರ ರಾತ್ರಿ ದೆಹಲಿಗೆ ಆಗಮಿಸಿದ ವಿ.ಸೋಮಣ್ಣ (V Somanna) ಮಂಗಳವಾರ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಉದ್ದೇಶ ಪೂರ್ವಕವಾಗಿ ಸೋಲಿಸುವ ಯತ್ನ ಆಗಿದೆ. ಕುತಂತ್ರದ ಕಾರಣಗಳಿಂದ ನಾನು ಸೋಲು ಕಂಡಿದ್ದೇನೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಂವಿಧಾನದ ತಿದ್ದುಪಡಿ ಮಾಡಿ 224 ಕ್ಷೇತ್ರಗಳಲ್ಲೂ ಸಿಎಂ, ಡಿಸಿಎಂ ಘೋಷಿಸಿ – ಈಶ್ವರಪ್ಪ ಲೇವಡಿ
Advertisement
Advertisement
ಈ ನಡುವೆ ಸೋಮಣ್ಣ ಅವರಿಗೆ ತುಮಕೂರು ಟಿಕೆಟ್ ಕೊಡಿಸಲು ಸಂಸದ ಬಸವರಾಜು ಪ್ರಯತ್ನ ಮಾಡುತ್ತಿದ್ದಾರೆ. ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿರುವ ಸಂಸದ ಬಸವರಾಜು, ಸೋಮಣ್ಣ ಪರ ಬ್ಯಾಟ್ ಬೀಸುತ್ತಿದ್ದಾರೆ. ತಮ್ಮ ಬದಲಿಗೆ ವಿ.ಸೋಮಣ್ಣ ಅವರಿಗೆ ಟಿಕೇಟ್ ನೀಡುವಂತೆ ಅಮಿತ್ ಶಾ ಅವರಿಗೂ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
Advertisement