ಮಡಿಕೇರಿ: ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿಲ್ಲಾ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ವತಿಯಿಂದ ಸೋಮವಾರಪೇಟೆ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕಾಫಿ ತೋಟದ ಲೈನ್ ಮನೆಯಲ್ಲಿರುವ ಕಾರ್ಮಿಕರಿಗೆ ಹಾಗೂ ನಿವೇಶನ ಇಲ್ಲದ ಕೂಲಿ ಕಾರ್ಮಿಕರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಸೂರಿಗಾಗಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಮೂಲಕ ಜಿಲ್ಲೆಯಾದ್ಯಂತ ಹೋರಾಟ ಮಾಡುತ್ತ ಸಂಬಂಧಿಸಿದ ಇಲಾಖೆಗೆ ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಾ ಬಂದಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಇದನ್ನೂ ಓದಿ: ಸಂಪಾಜೆ ಘಾಟಿಯಲ್ಲಿ ಉಕ್ಕುತ್ತಿರುವ ಅಂತರ್ಜಲ – ರಸ್ತೆ ಕುಸಿಯುವ ಅತಂಕ- ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು
Advertisement
Advertisement
ರೆವಿನ್ಯೂ ಇಲಾಖೆ, ಸಂಬಂಧಿಸಿದ ಇಲಾಖೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಜನಪ್ರತಿನಿಧಿಗಳು ಚುನಾವಣೆಗೂ ಮುನ್ನ ಕಾರ್ಮಿಕ ಮತದಾರರಿಗೆ ಭರವಸೆಗಳನ್ನು ನೀಡಿ ಮೋಸ ಮಾಡುತ್ತಿದ್ದಾರೆ ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಜಿಲ್ಲಾಧ್ಯಕ್ಷ ಎಚ್.ಎಂ. ಸೋಮಪ್ಪ ದೂರಿದರು. ಮಾದಾಪುರ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವುದರೊಂದಿಗೆ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿದರು. ತಾಲೂಕು ಕಚೇರಿಯ ಮೂಲಕ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಇದನ್ನೂ ಓದಿ: ಕಸ ಆಯುವ ಮಹಿಳೆಯ ಪರ್ಫೆಕ್ಟ್ ಇಂಗ್ಲಿಷ್ – ವೀಡಿಯೋ ನೋಡಿ ನೆಟ್ಟಿಗರು ಫಿದಾ