– ಜೆಪಿ ನಡ್ಡಾಗೆ ಬಿಜೆಪಿ ಪ್ರಮುಖರಿಂದ ಪತ್ರ
– ಹೊರಟ್ಟಿ ವಿರುದ್ಧ ದಾಖಲೆ ಸಹಿತ ಗಂಭೀರ ಆರೋಪ
ಹುಬ್ಬಳ್ಳಿ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಮೇಲ್ಮನೆ ಸದಸ್ಯತ್ವದ ಅವಧಿ ಮುಗಿಯುತ್ತಿದ್ದು, ಇದೀಗ ಅವರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಊಹಾಪೋಹಗಳು ಎದ್ದಿವೆ.
Advertisement
ಒಂದು ಕಡೆ ಪಕ್ಷಕ್ಕೆ ಹೊರಟ್ಟಿ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಕೆಲವು ಬಿಜೆಪಿಗರೇ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
Advertisement
ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಬಿಜೆಪಿ ಪ್ರಮುಖರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹೊರಟ್ಟಿ ವಿರುದ್ಧ ಎಫ್‌ಐಆರ್ ಸಹಿತ ಆರೋಪಗಳ ಸುರಿಮಳೆಯಿದೆ. ಇದರ ಜೊತೆಗೆ ಪ್ರಮುಖ ಹತ್ತು ಅಂಶಗಳನ್ನು ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: 8ಕ್ಕೂ ಹೆಚ್ಚು ಸ್ವಾಮೀಜಿಗಳೊಂದಿಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಿಸಿದ ಸಿದ್ದಗಂಗಾ ಶ್ರೀ
Advertisement
Advertisement
ಹತ್ತು ಅಂಶಗಳು:
1) ಬಸವರಾಜ್ ಹೊರಟ್ಟಿಗೆ 76 ವರ್ಷ. ಪಕ್ಷದ ನಿಯಮದಂತೆ ಇವರಿಗೆ ಟಿಕೆಟ್ ನೀಡಲು ಅವಕಾಶವಿಲ್ಲ.
2) ಈ ಹಿಂದೆ ಹೊರಟ್ಟಿ ಒಂದೇ ಸಮಯದಲ್ಲಿ ಎರಡೆರಡು ವೇತನ ಪಡೆದಿದ್ದರು. 1980ರಲ್ಲಿ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರೂ 1999ರ ವರೆಗೆ ಲ್ಯಾಮಿಂಗ್ಟನ್ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ವೇತನ ಪಡೆದಿದ್ದರು.
3) ಧಾರವಾಡದಲ್ಲಿ ಎಸ್‌ಟಿ ಸಮಾಜಕ್ಕೆ ಸೇರಿದ ಸರ್ವೋದಯ ಶಿಕ್ಷಣ ಸಂಸ್ಥೆ ಆಸ್ತಿ ಕಬಳಿಸಿದ ಆರೋಪ ಇವರ ಮೇಲಿದೆ.
4) ಶಿಕ್ಷಣ ಸಂಸ್ಥೆ ವಿಚಾರದಲ್ಲಿ ಇವರ ಮೇಲೆ ಎಫ್‌ಐಆರ್ ದಾಖಲಾಗಿದೆ.
5) ಹಿಂದುತ್ವ ವಿರುದ್ಧದ ಚಳುವಳಿಯಲ್ಲಿ ಕಾಂಗ್ರೆಸ್ ಜೊತೆ ಹೊರಟ್ಟಿ ಗುರುತಿಸಿಕೊಂಡಿದ್ದರು.
6) ಬಿಜೆಪಿ ಪಕ್ಷದ ಸಿದ್ಧಾಂತಗಳನ್ನು ಇವರು ಒಪ್ಪಿಕೊಂಡಿಲ್ಲ.
7) ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ.
8) ಕ್ಷೇತ್ರದಲ್ಲಿ 17 ಶಾಸಕರು, 3 ಸಂಸತ್ ಸದಸ್ಯರು, 4 ಪರಿಷತ್ ಸದಸ್ಯರು, ಓರ್ವ ಸಭಾಪತಿ, 3 ಕ್ಯಾಬಿನೆಟ್ ಸಚಿವರು, ಒಬ್ಬ ಕೇಂದ್ರ ಸಚಿವ, ರಾಜ್ಯದ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿದ್ದಾರೆ.
9) ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಯಾರೊಬ್ಬರೂ ಶಾಸಕರಿಲ್ಲ.
10) ಬಸವರಾಜ್ ಹೊರಟ್ಟಿ ಒಬ್ಬ ಕಳಂಕಿತ ವ್ಯಕ್ತಿ, ಇಂತಹ ಕಳಂಕಿತ ವ್ಯಕ್ತಿಗೆ ಟಿಕೆಟ್ ಕೊಟ್ಟು ಸಾಧಿಸುವುದು ಏನಿದೆ? ಇದನ್ನೂ ಓದಿ: 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು
ಹೀಗೆ ಪತ್ರದ ಜೊತೆಗೆ ಹಲವು ದಾಖಲೆಗಳನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಯಾವುದೇ ಕಾರಣಕ್ಕೂ ಹೊರಟ್ಟಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಬಾರದು ಎಂದು ಮನವಿ ಮಾಡಲಾಗಿದೆ.