ಶಿವಮೊಗ್ಗ: ಕೆಲವೊಮ್ಮೆ ಬಾಯಿ ತಪ್ಪಿ ಸತ್ಯ ಹೇಳುವ ಸಚಿವ ಈಶ್ವರಪ್ಪ ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ವಿಧಾನ ಪರಿಷತ್ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಷತ್ ನ 20 ಸ್ಥಾನಗಳಲ್ಲಿ ಕನಿಷ್ಠ 15 ಸ್ಥಾನದಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
Advertisement
Advertisement
ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಗೆ ಜೆಡಿಎಸ್ ಬೆಂಬಲಿಸುತ್ತಾರೆ. ಕೆಲವು ಕ್ಷೇತ್ರದಲ್ಲಿ ಜೆಡಿಎಸ್ ಸ್ಥಳೀಯ ಮುಖಂಡರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಾರೆ ಎಂದರು. ಸಚಿವ ಈಶ್ವರಪ್ಪ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ್ದಾರೆ. ಅವರು ಕೆಲವೊಮ್ಮೆ ಬಾಯಿ ತಪ್ಪಿ ಸತ್ಯ ಹೇಳುತ್ತಾರೆ. ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: 76ರ ಹರೆಯದಲ್ಲಿ ಪೈಲಟ್ ಆಗುವ ಕನಸು ನನಸು
Advertisement
Advertisement
ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಟೀಕೆ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ನಿರ್ವಹಣೆ ಮಾಡಲು ಆಗದೇ ಇದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ ಕೊಳೆತು ನಾರುತ್ತಿದೆ ಎನ್ನುವುದು ಮನವರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಟೀಕಿಸಿದರು.
ಅಧಿವೇಶನ ಆರಂಭವಾಗುತ್ತಿದೆ. ಅತಿವೃಷ್ಟಿ ಸಮಸ್ಯೆಯಾಗಿದೆ. ಮೂರು ನಾಲ್ಕು ಪಟ್ಟು ಮಳೆ ಹೆಚ್ಚಾಗಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಆಗಿದೆ. ಒಂದು ತಿಂಗಳಾಯ್ತು, ಇನ್ನು ಕೂಡಾ ಬೆಳೆ ಹಾನಿ ಬಗ್ಗೆ ಸರ್ವೇ ಆಗಿಲ್ಲ. 6 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ರೈತರ ವಿರೋಧಿ ಸರ್ಕಾರ ಇದಾಗಿದೆ. ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅದಕ್ಕೆ ಜನರು ಶಾಪ ಹಾಕುತ್ತಿದ್ದಾರೆ. ರಾಜಕೀಯದಲ್ಲಿ ಧುೃವೀಕರಣ ಶುರುವಾಗಿದೆ. ಜೆಡಿಎಸ್ ಮತ್ತು ಬಿಜೆಪಿಯಿಂದ ಅನೇಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಹೊರ ದೇಶದಿಂದ ಬಂದವರು ಮಿಸ್ಸಿಂಗ್ ಆಗಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಏರ್ ಪೋರ್ಟ್ ನಲ್ಲಿ ಭ್ರಷ್ಟಾಚಾರ ಇರಬೇಕು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಮಿಸ್ಸಿಂಗ್ ಆಗಿದ್ದಾರೆ. ಇದು ಲಂಚ ಹೊಡೆಯುವ ಸರ್ಕಾರ. ಇದರ ಮೇಲೆ ಯಾವುದೇ ನಿರೀಕ್ಷೆ ಇಲ್ಲ. ಶೇ.40 ಸರ್ಕಾರ ಆಗಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ
ಈಗಾಗಲೇ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿರುವೆ. ನ್ಯಾಯಾಂಗ ತನಿಖೆ ಆಗಬೇಕು. ರಾಜ್ಯಪಾಲ ಆಡಳಿತ ರಾಜ್ಯದಲ್ಲಿ ಜಾರಿಯಾಗಬೇಕು. ಕಾಂಗ್ರೆಸ್ ಸರ್ಕಾರ ಸೇರಿ ಎಲ್ಲ ತನಿಖೆ ಮಾಡಲಿ. ಇವರಿಗೆ ಧಮ್ ಇಲ್ಲ. ತನಿಖೆ ಆದರೆ ಅವರು ಬೆತ್ತಲೆ ಆಗುತ್ತಾರೆ. ನನ್ನನ್ನು ಟೀಕೆ ಮಾಡಿದ್ರೆ ಈಶ್ವರಪ್ಪ ಲೀಡರ್ ಆಗುತ್ತೇನೆ ಅಂದು ಕೊಂಡಿದ್ದಾನೆ. ಜನರ ಆಶೀರ್ವಾದ ಇದ್ದರೇ ಮಾತ್ರ ನಾಯಕ ಆಗಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.