ನವದೆಹಲಿ: ಕೇಂದ್ರ ಗೃಹ ಹಾಗೂ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯ ನಂ.6 ಕೃಷ್ಣ ಮೆನನ್ ಮಾರ್ಗದಲ್ಲಿನ ನಿವಾಸದಲ್ಲಿ ಕರ್ನಾಟಕ ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಕರ್ನಾಟಕ ರಾಜ್ಯ ಮಟ್ಟದ ಸಹಕಾರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದರು. ‘ಸಹಕಾರ್ ಸೇ ಸಮೃದ್ಧಿ’ ಧ್ಯೇಯಘೋಷದೊಂದಿಗೆ ಹಮ್ಮಿಕೊಳ್ಳುತ್ತಿರುವ ಈ ಕಾರ್ಯಕ್ರಮದಲ್ಲಿ ಸಹಕಾರ ಇಲಾಖೆಗೆ ಹೊಸ ರೂಪ ನೀಡುವುದು ಹಾಗೂ ಸಹಕಾರ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಮಿತ್ ಶಾ ಅವರಿಗೆ ತಿಳಿಸಿದರು. ಇದನ್ನೂ ಓದಿ: ಭಾರತ್ ಬಂದ್ ಯಾವುದೇ ಪರಿಣಾಮ ಬೀರುವುದಿಲ್ಲ: ಜೋಶಿ
Advertisement
ಅಲ್ಲದೆ ಸಹಕಾರ ಇಲಾಖೆ ಆಧುನೀಕರಣಕ್ಕೆ 5 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಅಮಿತ್ ಶಾ ಅವರನ್ನು ಕೋರಿದರು. ಸಚಿವ ಎಸ್.ಟಿ.ಸೋಮಶೇಖರ್ ಅವರ ಮನವಿಗೆ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ
Advertisement
Advertisement
ಭೇಟಿ ಸಂದರ್ಭದಲ್ಲಿ ಕರ್ನಾಟಕ ಸೌಹಾರ್ದ ಒಕ್ಕೂಟದ ಅಧ್ಯಕ್ಷರಾದ ಕೃಷ್ಣರೆಡ್ಡಿ, ಸಹಕಾರ ಭಾರತೀಯ ರಾಷ್ಟ್ರೀಯ ಅಧ್ಯಕ್ಷರಾದ ರಮೇಶ್ ವೈದ್ಯ, ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಿ.ಪಿ.ಉಮೇಶ್, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರೆ ಸಹಕಾರಿ ಧುರೀಣರು ಉಪಸ್ಥಿತರಿದ್ದರು.