ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ಈಗ ಹಿರಿಯ ನಟ ಕೀರ್ತಿರಾಜ್ ಹಾಗೂ ಅವರ ಪುತ್ರ ಧರ್ಮ ಕೀರ್ತಿರಾಜ್ ಆಸ್ಪತ್ರೆಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯವನ್ನು ವಿಚಾರಿಸಿದರು.
ದರ್ಶನ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಕೀರ್ತಿರಾಜ್ ಮಾಧ್ಯಮಗಳೊಂದಿಗೆ ಮಾತನಾಡಿ, “ಚಾಮುಂಡೇಶ್ಚರಿ ಆಶೀರ್ವಾದದಿಂದ ದರ್ಶನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದರ್ಶನ್ ಜೀವಕ್ಕೆ ಯಾವುದೇ ತೊಂದರೆ ಇಲ್ಲ. ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ. ದರ್ಶನ್ ಅವರನ್ನು ಮಾತನಾಡಿಸಿದ್ದು, ಆರಾಮಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದರ್ಶನ್ ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ- ಪತ್ನಿ ವಿಜಯಲಕ್ಷ್ಮಿ ವಿವರಿಸಿದ್ದು ಹೀಗೆ
ದರ್ಶನ್ ಸೇಫ್ ಆಗಿದ್ದಾರೆ. ದರ್ಶನ್ ಕೈ ಫ್ರಾಕ್ಚರ್ ಆಗಿದೆ. ಸದ್ಯ ಸರ್ಜರಿ ಮಾಡಿ ವೈದ್ಯರು ಸರಿ ಮಾಡಿದ್ದಾರೆ. ದೇವರಾಜು ಅವರು ಕೂಡ ಆರೋಗ್ಯವಾಗಿದ್ದಾರೆ. ದೇವರ ಆಶೀರ್ವಾದಿಂದ ಪಾರಾಗಿದ್ದಾರೆ. ಕೆಟ್ಟ ಗಳಿಗೆಯಲ್ಲಿ ಅಪಘಾತವಾಗಿದೆ. ಕಾರ್ ಸ್ಕಿಡ್ ಆಗಿ ಈ ಅವಘಡ ಸಂಭವಿದ್ದು, ಕಾರ್ ನಿಲ್ಲಲಿ ಎಂದು ಬ್ರೇಕ್ ಹಾಕುತ್ತೀವಿ, ಆದರೆ ಕೆಲವೊಂದು ಸಲ ಹೀಗಾಗುತ್ತೆ ಅಂದರು. ಇದನ್ನೂ ಓದಿ: ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ
ಯಾಕೆ ಅಪಘಾತವಾಯ್ತು, ಹೇಗೆ ಆಯ್ತು ಅನ್ನೋದು ಗೊತ್ತಿಲ್ಲ. ನಾವು ಕಾರು ಓಡಿಸುವಾಗ ಬ್ರೇಕ್ ಹಾಕುತ್ತೇವೆ. ಆಗ ವಾಹನ ನಿಲ್ಲುತ್ತೆ ಅಂದುಕೊಳ್ಳುತ್ತೇವೆ. ನಿಲ್ಲದೆ ಯಾವುದೋ ವಾಹನಕ್ಕೆ ಡಿಕ್ಕಿ ಹೊಡೆದರೆ ಏನು ಮಾಡಲು ಸಾಧ್ಯ? ಭಾನುವಾರ ರಾತ್ರಿ ಮಳೆಯಾಗಿತ್ತು. ಕಾರಿನಲ್ಲಿ ಬರುವಾಗ ಸ್ಕಿಡ್ ಆಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ದರ್ಶನ್ ಅವರು ಚೆನ್ನಾಗಿದ್ದಾರೆ. ನಾನು ಮಾತನಾಡಿಸಿಕೊಂಡು ಬಂದಿದ್ದೇನೆ ಎಂದು ಖಳನಟ ಕೀರ್ತಿರಾಜ್ ಹೇಳಿದರು. ಇದನ್ನೂ ಓದಿ: ದರ್ಶನ್ ಕಾರ್ ಅಪಘಾತದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಹೀಗಂದ್ರು
ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಇಂದು ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತದ ಬಳಿಕ ನಾಪತ್ತೆಯಾಗಿದ್ದ ದರ್ಶನ್ ಕಾರ್ ಪತ್ತೆ
ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಮುಂಜಾನೆ ಮಳೆಯಾಗುತ್ತಿದ್ದರಿಂದ ರಸ್ತೆ ಸರಿಯಾಗಿ ಕಾಣದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv