ಗಾಂಧೀನಗರ: ಗುಜರಾತ್‌ನ (Gujarat) ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.
ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ ಭೂಮಿಯಲ್ಲಿ ಐವತ್ತಕ್ಕೂ ಹೆಚ್ಚು ಕಟ್ಟಡಗಳು ಮತ್ತು ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಎಲ್ಲಾ ಅತಿಕ್ರಮಣ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ
- Advertisement -
- Advertisement -
1.5 ಕಿಮೀ ದೂರದಲ್ಲಿರುವ ಸೋಮನಾಥ ದೇವಾಲಯದ ಬಳಿ 103 ಎಕರೆ ಸರ್ಕಾರಿ ಭೂಮಿಯನ್ನು ಆಕ್ರಮಿಸಿಕೊಂಡಿರುವುದು ಪೊಲೀಸ್ ಮತ್ತು ಆಡಳಿತಾತ್ಮಕ ಕಾರ್ಯಾಚರಣೆಗೆ ಕಾರಣವಾಯಿತು. ಈ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಭಾಗವಾಗಿ 45 ವಸತಿ ಕಟ್ಟಡಗಳ ಜೊತೆಗೆ ಒಂಬತ್ತು ಧಾರ್ಮಿಕ ಸ್ಥಳಗಳನ್ನು ಕೆಡವಲಾಯಿತು. ಸುಮಾರು 320 ಕೋಟಿ ಮೌಲ್ಯದ ಅಂದಾಜು 102 ಎಕರೆ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.
- Advertisement -
ಜಿಲ್ಲಾಧಿಕಾರಿ ಡಿ.ಡಿ. ಸೋಮನಾಥದಲ್ಲಿನ ಅಕ್ರಮ ಒತ್ತುವರಿಯನ್ನು ತೆರವು ಮಾಡುವಂತೆ ಆಡಳಿತದಿಂದ ಬಹಳ ಹಿಂದೆಯೇ ನೋಟಿಸ್ ನೀಡಲಾಗಿತ್ತು ಎಂದು ಜಡೇಜಾ ಹೇಳಿದ್ದಾರೆ. ಆದರೆ, ಈ ಎಚ್ಚರಿಕೆಗಳ ಹೊರತಾಗಿಯೂ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಗುಜರಾತ್‌ನ ಸೋಮನಾಥದಲ್ಲಿ 9 ಅಕ್ರಮ ಮಸೀದಿಗಳ ತೆರವು
- Advertisement -
ಉಜ್ಜಯಿನಿ ಕಾರಿಡಾರ್‌ನಂತೆಯೇ, ಸೋಮನಾಥದಲ್ಲಿ ಹೊಸ ಕಾರಿಡಾರ್ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿದೆ. ಸೋಮನಾಥ ದೇವಾಲಯದ ವಿವಿಧ ಅಭಿವೃದ್ಧಿ ಯೋಜನೆಗಳು ಪ್ರಗತಿಯಲ್ಲಿವೆ.