ಉಡುಪಿ: ಮಗನೇ ತಂದೆ – ತಾಯಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ.
ಗಾಂಧಿನಗರ ನಿವಾಸಿ ಮೆಹಬೂಬ್, ಸಂಶದ್ ಬೇಗಂ ಕೊಲೆಯಾದ ದುರ್ದೈವಿಗಳು. ಶಾಹಿದ್ ಅಲಿ (31) ಕೊಲೆಗೈದ ಆರೋಪಿಯಾಗಿದ್ದಾನೆ. ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಶಂಕೆ ವ್ಯಕ್ಯವಾಗಿದೆ. ಇದನ್ನೂ ಓದಿ: ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ ಕೇಸ್ – 6 ಮಂದಿ ಅರೆಸ್ಟ್
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಉದ್ಯಮಿ ಡೇವಿಡ್ ಹತ್ಯೆ ಕೇಸ್ – ಮತ್ತೊಬ್ಬ ಆರೋಪಿ ಕಾಲಿಗೆ ಗುಂಡೇಟು
