ನವದೆಹಲಿ: ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ಬಿಜೆಪಿ (BJP) ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ (Pragya Thakur) ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಕಟುವಾಗಿ ಟೀಕಿಸಿದ್ದಾರೆ.
ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ಭಾರತದ ಬಗ್ಗೆ ನೀಡಿರುವ ಕೆಲವು ಹೇಳಿಕೆಗಳಿಗೆ ಪ್ರಜ್ಞಾ ಠಾಕೂರ್, ರಾಹುಲ್ ಅವರನ್ನು ದೇಶದಿಂದ ಹೊರಹಾಕಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ವಿದೇಶಿ ಮಹಿಳೆಗೆ ಹುಟ್ಟಿದ ಮಗು ದೇಶಭಕ್ತನಾಗಲು ಸಾಧ್ಯವಿಲ್ಲ ಎಂಬ ಚಾಣಕ್ಯನ ಮಾತು ಸಾಬೀತಾಗಿದೆ. ರಾಹುಲ್ ವಿದೇಶಿ ನೆಲದಲ್ಲಿ ನೀಡಿರುವ ಹೇಳಿಕೆಗಳು ಇದನ್ನು ಸಾಬೀತುಪಡಿಸಿದೆ. ಈ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷನನ್ನು ದೇಶದಿಂದ ಹೊರ ಹಾಕಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉದ್ಘಾಟನೆಗೂ ಮುನ್ನವೇ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ರೈಲ್ವೆ ನಿಲ್ದಾಣ ಗಿನ್ನಿಸ್ ದಾಖಲೆ
Advertisement
ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಾತನಾಡುವ ವೇಳೆ ಹೆಚ್ಚಾಗಿ ಎಲ್ಲಾ ಮೈಕ್ಗಳು ಮೌನವಾಗಿರುತ್ತವೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ ಎಂದು ಟೀಕಿಸಿ ರಾಹುಲ್ ಗಾಂಧಿ ಲಂಡನ್ನಲ್ಲಿ ಬ್ರಿಟಿಷ್ ಸಂಸದರಿಗೆ ತಿಳಿಸಿದ್ದರು.
Advertisement
ಈ ಹಿನ್ನೆಲೆ ವಾಗ್ದಾಳಿ ನಡೆಸಿರುವ ಪ್ರಜ್ಞಾ ಠಾಕೂರ್, ನಿಮ್ಮ ತಾಯಿ (ಸೋನಿಯಾ ಗಾಂಧಿ) ಇಟಲಿಯಿಂದ ಬಂದವರಾಗಿರುವುದರಿAದ ನೀವು ಭಾರತದವರಲ್ಲ ಎಂದು ನಾವು ಭಾವಿಸಿದ್ದೇವೆ. ಕಾಂಗ್ರೆಸ್ ಅಸ್ತಿತ್ವ ಕೊನೆಗೊಳ್ಳುವ ಹಂತದಲ್ಲಿದೆ. ಈಗ ಅವರ ಮನಸ್ಸು ಕೂಡಾ ಭ್ರಷ್ಟವಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ – ಮಂಡ್ಯ, ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ