ಹುಬ್ಬಳ್ಳಿ; ಆಸ್ತಿಗಾಗಿ ಮಾರಕಾಸ್ತ್ರದಿಂದ ಕೊಚ್ಚಿ ಹೆತ್ತ ತಂದೆ ಹಾಗೂ ಮಲತಾಯಿಯನ್ನು ವ್ಯಕ್ತಿ ಬರ್ಬರವಾಗಿ ಹತ್ಯೆಗೈದ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಕುಸುಗಲ್ (Kusugal) ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅಶೋಕ, ಶಾರದಮ್ಮ ಎಂದು ಗುರುತಿಸಲಾಗಿದೆ ಆರೋಪಿ ಗಂಗಾಧರಪ್ಪ ಕೃತ್ಯ ಎಸಗಿ ಪರಾರಿಯಾಗಿದ್ದಾನೆ.ಇದನ್ನೂ ಓದಿ: ಕಿತ್ತಗಾನಹಳ್ಳಿ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಓರ್ವ ಚಿಕಿತ್ಸೆ ಫಲಿಸದೇ ಸಾವು
ಮೃತ ಅಶೋಕನ ಮೊದಲ ಹೆಂಡತಿಯ ಮಗ ಗಂಗಾಧರಪ್ಪ ಬಾಗಲಕೋಟೆ ಜಿಲ್ಲೆಯ ಬೀಳಿಗಿಯಲ್ಲಿ ವಾಸಿಸುತ್ತಿದ್ದ. ಎರಡು ಎಕರೆ ಆಸ್ತಿಗಾಗಿ ಆಗಾಗ ತಂದೆ ಮತ್ತು ಮಗನ ನಡುವೆ ಜಗಳ ನಡೆಯುತ್ತಿತ್ತು. ಇಂದು ಕೂಡ ಆರೋಪಿ ಮನೆಗೆ ಕುಡಿದು ಬಂದು ತಂದೆ ಜೊತೆ ಜಗಳ ಮಾಡಿದ್ದ. ಮನೆಗೆ ಬಂದು ಆಸ್ತಿ ಬರೆದುಕೊಡುವಂತೆ ಒತ್ತಾಯಿಸಿದ್ದ. ಈ ವೇಳೆ ತಂದೆ ಆಸ್ತಿ ಕೊಡಲು ನಿರಾಕರಿಸಿದ್ದರು. ಈ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ ಹಾಗೂ ಮಲತಾಯಿಯ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಸದ್ಯ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಗಂಗಾಧರಪ್ಪನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಆತ್ಮಹತ್ಯೆ