ತುಮಕೂರು: ತಂದೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್(Kunigal) ತಾಲೂಕಿನಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ಗಂಗೇನಹಳ್ಳಿ (Gangenahalli) ಗ್ರಾಮದ ಸುಹೇಲ್ ಖಾನ್ (21) ಮೃತ ದುರ್ದೈವಿ. ಮನೆಯಲ್ಲೇ ಇದ್ದ ಸುಹೇಲ್‍ಗೆ ಅಡಿಕೆ ಕೀಳುವ ಕೆಲಸಕ್ಕೆ ಹೋಗುವಂತೆ ತಂದೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವಕ ಗ್ರಾಮದ ಗಂಗಣ್ಣ ಎಂಬುವರ ಅಡಿಕೆ ತೋಟಕ್ಕೆ ಹೋಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ : ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗ ಬಾಧೆ ಹಾವಳಿ ಬಗ್ಗೆ ಕೇಂದ್ರಕ್ಕೆ ನಿಯೋಗ – ಆರಗ ಜ್ಞಾನೇಂದ್ರ
ವಿಷ ಸೇವಿಸಿ ತೀವ್ರ ಅಸ್ವಸ್ಥನಾಗಿದ್ದ ಯುವಕನನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತುಮಕೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ಕಥೆ ಕಟ್ಟಿದ್ಳು – ಬಾಲಕಿ ಮಾಸ್ಟರ್‌ಮೈಂಡ್‌ಗೆ ಪೊಲೀಸರೇ ಶಾಕ್