ಮಂಡ್ಯ: ಹೆತ್ತವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಮಗ ಆತ್ಮಹತ್ಯೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತೀಹಳ್ಳಿ ಗ್ರಾಮದಲ್ಲಿ ಜರುಗಿದೆ.
ಮೃತ ದುರ್ದೈವಿ ಗಿರೀಶ್(32) ಆಗಿದ್ದು, ತನ್ನ ಆತ್ಮಹತ್ಯೆಗೆ ಅಪ್ಪ ರಾಜು, ಅಮ್ಮ ದೇವಮಣಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಗಿರೀಶ್ ತಂದೆ ರಾಜು ನಿವೃತ್ತ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದರೆ, ತಾಯಿ ದೇವಮಣಿ ಈಗಲೂ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. 11 ವರ್ಷದ ಹಿಂದೆ ತ್ರಿವೇಣಿ ಎಂಬಾಕೆಯನ್ನು ಗಿರೀಶ್ ಮದುವೆಯಾಗಿದ್ದ. ಇಷ್ಟು ವರ್ಷವಾದರೂ ಸಹ ಇವರಿಗೆ ಮಕ್ಕಳಾಗಿರಲಿಲ್ಲ. ಇದನ್ನೂ ಓದಿ: ಲಂಕೆಯಲ್ಲಿ ‘ಪಿಪಿಪಿ’ ಸಾಂಗ್ ಗುಂಗು – ಭರ್ಜರಿ ಸ್ಟೆಪ್ಸ್ ಹಾಕಿದ ಯೋಗಿ, ಕೃಷಿ ತಾಪಂಡ
ಹೀಗಾಗಿ ಅಪ್ಪ-ಅಮ್ಮ ಮಗ ಗಿರೀಶ್‍ಗೆ ಮಾನಸಿಕ ಹಿಂಸೆ ನೀಡಿದ್ದಾರೆ. ಅಲ್ಲದೇ ಆಸ್ತಿ ಕೊಟ್ಟಿರಲಿಲ್ಲ. ಜೊತೆಗೆ ವಾಸ ಮಾಡಲು ಮನೆ ಕೂಡ ನೀಡಿರಲಿಲ್ಲ ಎಂದು ಆರೋಪ ಮಾಡಿದ್ದಾರೆ. ತಾವು ಚೆಂದದ ಮನೆಯಲ್ಲಿ ವಾಸವಿದ್ದು, ಗಿರೀಶ್ ಮತ್ತು ಅವರ ಪತ್ನಿಗೆ ತಮ್ಮ ಮನೆಯ ಕೊಟ್ಟಿಯಲ್ಲಿ ವಾಸ ಮಾಡಲು ಬಿಟ್ಟಿದ್ದರು. ಮಕ್ಕಳಾಗಲಿಲ್ಲ ಎಂದು ದಿನೇ, ದಿನೇ ತಂದೆ-ತಾಯಿಗಳು ಗಿರೀಶ್ ಹಾಗೂ ಆತನ ಪತ್ನಿಯನ್ನು ಹಂಗಿಸುತ್ತಿದ್ದರು. ಇದರಿಂದ ಮನನೊಂದು ಗಿರೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ
ತನ್ನ ಸಾವಿಗೆ ಅಪ್ಪ, ಅಮ್ಮನ ಕಿರುಕುಳವೇ ಕಾರಣ ಎಂದು ಡೆತ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನ ಸಾವಿನ ನಂತರ ತಂದೆ-ತಾಯಿಗಳು ತಲೆ ಮರೆಸಿಕೊಂಡಿದ್ದು, ಸದ್ಯ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.