ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ವ್ಯಕ್ತಿಯೊಬ್ಬ ಜನ್ಮ ನೀಡಿದ ತಾಯಿ (Mother), ತಂದೆಗಾಗಿ (Father) ದೇವಸ್ಥಾನ (Temple) ನಿರ್ಮಿಸಿ ಪ್ರತಿನಿತ್ಯ ಪೂಜೆ ಮಾಡಿ ಇತರರಿಗೆ ಆದರ್ಶವಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದ ಸುರೇಶ್ ತಳವಾರ ಎಂಬುವರು ತಮ್ಮ ಜಮೀನಿನಲ್ಲಿರುವ ತಂದೆ ಗುರಪ್ಪ ತಳವಾರ ಹಾಗೂ ತಾಯಿ ಪಾರ್ವತಿ ತಳವಾರ ಅವರ ಸಮಾಧಿ ಮೇಲೆ ಪುತ್ಥಳಿ ಸ್ಥಾಪಿಸಿ ದೇವಸ್ಥಾನ ನಿರ್ಮಿಸಿ ತಂದೆ ತಾಯಿಯ ಮೇಲಿನ ಪ್ರೇಮ ಮೆರೆದಿದ್ದಾರೆ.
Advertisement
Advertisement
ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹಾಗೂ ಸಮಾಜ ಸೇವಕರಾಗಿರುವ ಸುರೇಶ್ ತಳವಾರ ಹಾಗೂ ಅವರ ಸಹೋದರರಿಗೆ ಮೊದಲಿನಿಂದಲೂ ತಾಯಿ ತಂದೆ ಮೇಲೆ ಅಪಾರ ಭಕ್ತಿ ಇತ್ತು. 20 ವರ್ಷಗಳ ಹಿಂದೆ ಅವರ ತಂದೆ ಗುರಪ್ಪ ಸಾವನ್ನಪ್ಪಿದ್ದರು. ಕಳೆದ 2 ವರ್ಷದ ಹಿಂದೆ ಅವರ ತಾಯಿ ಪಾರ್ವತಿ ತೀರಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಅವರ ಪುಣ್ಯಸ್ಮರಣೆಯಂದು ಸಾವಿರಾರು ಜನರಿಗೆ ಅನ್ನಸಂತರ್ಪನೆ ಮಾಡುತ್ತಿದ್ದರು. ಇದನ್ನೂ ಓದಿ: ನಮ್ಮ ಸೊಸೈಟಿ ಬಗ್ಗೆ ಮಾತಾಡಲು ನೀನ್ಯಾರು?- ಎನ್.ಆರ್ ಸಂತೋಷ್‍ಗೆ ಗ್ರಾಮಸ್ಥರಿಂದ ತರಾಟೆ
Advertisement
Advertisement
ಆದರೆ ಈ ವರ್ಷ ತಂದೆ, ತಾಯಿಗಳು ಸದಾ ನಮ್ಮೊಂದಿಗೆ ಇರಬೇಕು ಎಂಬ ಭಾವನೆಯೊಂದಿಗೆ ಅವರ ದೇವಸ್ಥಾನ ನಿರ್ಮಿಸಿ ನಿತ್ಯ ಪೂಜಿಸುತ್ತಿದ್ದಾರೆ. ಈ ಬಗ್ಗೆ ಸುರೇಶ್ ಮಾತನಾಡಿ, ತಂದೆ ತಾಯಿಯ ಆದರ್ಶ ಮತ್ತು ಮಾರ್ಗದರ್ಶನ ಅವರು ನಮ್ಮ ಜೊತೆಗೆ ಇದ್ದರೂ ಇಲ್ಲದ್ದಿದ್ದರೂ ಸಹ ಸದಾ ನಮ್ಮ ಮೇಲೆ ಅವರ ಆಶೀರ್ವಾದ ಇರಬೇಕು ಎಂಬ ದೃಷ್ಟಿಯಿಂದ ಅವರ ದೇವಸ್ಥಾನ ನಿರ್ಮಿಸಿದ್ದೇವೆ. ನಾವಿಂದು ಏನಾದರು ಸಾಧಿಸಿದ್ದರೆ ಅದಕ್ಕೆ ಅವರ ಉತ್ತಮ ಮಾರ್ಗದರ್ಶನ ಹಾಗೂ ಆಶೀರ್ವಾದ ಕಾರಣ. ಯಾವ ಮಕ್ಕಳು ತಂದೆ, ತಾಯಿಯನ್ನು ಕಡೆಗಣಿಸಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮೀನು ಮೃತಪಟ್ಟಿದ್ದಕ್ಕೆ ಮನನೊಂದು 13ರ ಬಾಲಕ ಆತ್ಮಹತ್ಯೆ