ಹಾವೇರಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಮಾವನನ್ನೇ ಕೊಲೆ ಮಾಡಿದ ಘಟನೆ ಹಾನಗಲ್‌ನ (Hangal) ಆಡೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮೈಲಾರಪ್ಪ (೪೩) ಎಂದು ಗುರುತಿಸಲಾಗಿದೆ. ಮಾವ ಹಾಗೂ ಅಳಿಯ ರಮೇಶ್ ನಡುವೆ ಜಗಳ ನಡೆದಿದೆ. ಈ ವೇಳೆ ಸಿಟ್ಟಿನಿಂದ ಮೈಲಾರಪ್ಪನನ್ನು ಗೋಡೆಗೆ ಬಲವಾಗಿ ತಳ್ಳಿದ್ದಾನೆ. ಇದರಿಂದ ಆತನ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು
ಇಬ್ಬರ ನಡುವೆ ಕೆಲವು ದಿನಗಳಿಂದ ನಿರಂತರ ಕಲಹ ನಡೆಯುತ್ತಿತ್ತು. ಅದು ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ರಮೇಶ್‌ನನ್ನು ಆಡೂರು ಪೊಲೀಸರು (Police) ಬಂಧಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾವೇರಿ (Haveri) ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿಚ್ಛೇದನಕ್ಕೆ ಒಪ್ಪದ ಪತ್ನಿಯ ಕೊಲೆಗೆ ಸ್ಕೆಚ್- ಅಪಘಾತಕ್ಕೆ ಯತ್ನಿಸಿ ಸಿಕ್ಕಿಬಿದ್ದ ಪತಿ
Web Stories