ಚಿಕ್ಕಮಗಳೂರು: ವ್ಯಕ್ತಿಯೊಬ್ಬ ತನ್ನ ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಮೂಡಿಗೆರೆ (Mudigere) ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಯಮುನಾ (65) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಆಕೆಯ ಅಳಿಯ ಶಶಿಧರ್ ಎಂದು ಗುರುತಿಸಲಾಗಿದೆ. ಕೊಲೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Advertisement
Advertisement
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಪರಾರಿಯಾಗಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.