ಬೆಳಗಾವಿ: ಮದ್ಯ (Alcohol) ಸೇವನೆಗೆ ಹಣ ನೀಡದ್ದಕ್ಕೆ ಮದ್ಯ ವ್ಯಸನಿ ಮಗನಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ತಂದೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ.
ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಹತ್ಯೆಗೈದ ಮಗ ಬಾಳಾಸಾಬ ಮಲ್ಲು ವನಖಂಡೆಯನ್ನು (49) ಪೊಲೀಸರು ಬಂಧಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ತುಕಾರಾಮ ವನಖಂಡೆ ಅವರನ್ನು ಮಹಾರಾಷ್ಟ್ರದ ಮೀರಜ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಕೋಲಾರ| ಮಹಿಳೆ ಅನುಮಾನಾಸ್ಪದ ಸಾವು – ಕೊಲೆ ಶಂಕೆ, ಪತಿ ಪೊಲೀಸರ ವಶಕ್ಕೆ
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಳಾಸಾಬ ಮಲ್ಲು ವನಖಂಡೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.