CrimeDakshina KannadaDistrictsKarnatakaLatestLeading NewsMain Post

ಪುತ್ತೂರಿನಲ್ಲಿ ಪೈಶಾಚಿಕ ಕೃತ್ಯ – ಮಗನಿಂದಲೇ ತಾಯಿಯ ಮೇಲೆ ರೇಪ್‌

ಮಂಗಳೂರು: ಮಗನೇ ತಾಯಿಯ ಮೇಲೆಯೇ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ.

ಜಯರಾಮ ರೈ (35) ಬಂಧಿತ ಆರೋಪಿ. ಮಗನ ಕೃತ್ಯದಿಂದ ಶಾಕ್‌ಗೆ ಒಳಗಾದ 58 ವರ್ಷದ ತಾಯಿ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಜ.12ರ ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ ತಾಯಿಯ ತೀವ್ರ ವಿರೋಧದ ನಡುವೆಯೂ ಅಮಾನುಷವಾಗಿ ಪ್ರಾಣಿಯಂತೆ ಎರಗಿ ಅತ್ಯಾಚಾರ ಎಸಗಿದ್ದಾನೆ. ಇದನ್ನೂ ಓದಿ: ಗಾಳಿಪಟ ಹಾರಿಸುವಾಗ ಬಿದ್ದು ಒಂದೇ ದಿನ 63ಕ್ಕೂ ಹೆಚ್ಚು ಮಂದಿಗೆ ಗಾಯ

ಸಂತ್ರಸ್ತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಜಯರಾಮ ರೈ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್​​) ಮತ್ತು 506 ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕೃತ್ಯ ನಡೆದ ರಾತ್ರಿ ಊಟ ಮಾಡಿ ಆರೋಪಿ ತನ್ನ ಕೋಣೆಯಲ್ಲಿ ಮಲಗಿದ್ದ. ನಸುಕಿನ ಜಾವ 3 ಗಂಟೆಗೆ ತಾಯಿ ಮಲಗಿದ್ದ ಕೋಣೆಗೆ ತೆರಳಿ ಆರೋಪಿ ಅತ್ಯಾಚಾರ ಎಸಗಿದ್ದಾನೆ. ತಾಯಿ ಕಿರುಚಿ ಪ್ರತಿರೋಧ ತೋರಿದ್ದಾರೆ. ಆದರೆ ಆರೋಪಿ ಬಾಯಿಗೆ ಬಟ್ಟೆ ಒತ್ತಿ, ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿದ್ದಾನೆ. ಅತ್ಯಾಚಾರದ ಬಳಿಕ ವಿಚಾರವನ್ನು ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ. ಇದನ್ನೂ ಓದಿ: ಒಳ ಉಡುಪು, ಗುಪ್ತಾಂಗದಲ್ಲಿ ಚಿನ್ನ ಕಳ್ಳಸಾಗಣೆ ಮಾಡ್ತಿದ್ದ ಮೂವರು ಮಹಿಳೆಯರು ಅರೆಸ್ಟ್

ಜ.13ರಂದು ಬೆಳಗ್ಗೆ ನಾನು ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಪುತ್ರ ಬಲವಂತದಿಂದ ನನ್ನನ್ನು ಮನೆಯ ಹಾಲ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ಆರೋಪಿಸಿದ್ದಾರೆ. ಆರೋಪಿಗೆ ಮದುವೆಯಾಗಿದ್ದು, ಸೀಮಂತ ಮುಗಿಸಿರುವ ಪತ್ನಿ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Back to top button