ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು.
ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು.
ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, ತಿನಿಸುಗಳನ್ನು ಇಡಲಾಯಿತು. ಜೊತೆಗೆ ಸಮಾಧಿ ಮೇಲೆ ಅವರಿಗೆ ಇಷ್ಟವಾದ ಗುಟ್ಕಾ ಪ್ಯಾಕೇಟ್ ಇಟ್ಟು ನಮನ ಸಲ್ಲಿಸಲಾಯಿತು. ಇಂದು ಕೂಡ ಅವರ ಮನೆಗೆ ಅಭಿಮಾನಿಗಳು ದಂಡೇ ಹರಿದು ಬರುತ್ತಿದೆ. ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಸಾಹುಕಾರ
ಮಂಗಳವಾರ ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕೊನೆಯುಸಿರೆಳೆದಿದ್ದಾರೆ. ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ದೇವರು ಇನ್ನೊಮ್ಮೆ ದೊಡ್ಡಪ್ಪನಿಗೆ ಜೀವ ಕೊಡಲಿ: ಪೃಥ್ವಿ ಕತ್ತಿ ಕಣ್ಣೀರು