ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಂದು ಪೊಲೀಸರಿಗೆ ಶರಣಾದ ಮಗ

Public TV
1 Min Read
RAICHUR LINGASUGUR POLICE STATION 2

ರಾಯಚೂರು: ಗಾಂಜಾ, ಮದ್ಯ ಸೇವಿಸಿ ನಿತ್ಯ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯ (Father) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಹತ್ಯೆ (Murder) ನಡೆಸಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ.

ಬಂಡಿ ತಿಮ್ಮಣ್ಣ (55) ಕೊಲೆಯಾದ ವ್ಯಕ್ತಿಯಾದರೆ, ಶೀಲವಂತ ತಂದೆಯನ್ನು ಕೊಲೆ ಮಾಡಿದ ಆರೋಪಿ. ತಂದೆ ಪ್ರತಿ ನಿತ್ಯ ಗಾಂಜಾ, ಮದ್ಯ ಸೇವಿಸಿ ತಾಯಿಗೆ ಕಿರುಕುಳ ನೀಡುತ್ತಿದ್ದ ಎಂದು ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಗಣಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್‌ನಲ್ಲಿ ಸುಳಿವು ಸಿಕ್ಕಿದೆ: ಪರಮೇಶ್ವರ್

ಮಗ ಕುಟುಂಬಸ್ಥರ ಎದುರೇ ತಂದೆಯನ್ನು ಕೊಂದು ತಪ್ಪಿಸಿಕೊಳ್ಳಲು ದಾರಿಯಿಲ್ಲದ ಹಿನ್ನೆಲೆ ತಾನೇ ಪೊಲೀಸರಿಗೆ ಕರೆ ಮಾಡಿ, ಈ ಬಗ್ಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಲಿಂಗಸುಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಾನಾಗೇ ಪೊಲೀಸರಿಗೆ ಶರಣಾಗಿದ್ದು, ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ನೇಹಿತರ ಭೇಟಿಗೆ ಬಂದಿದ್ದ ಯೋಧನ ಮೇಲೆ ಮಾರಣಾಂತಿಕ ಹಲ್ಲೆ- ವೀಡಿಯೋ ವೈರಲ್

Share This Article