ಬೆಂಗಳೂರು: ಪುತ್ರ ಯತೀಂದ್ರ (Yathindra) ತಂದೆ ಸಿದ್ದರಾಮಯ್ಯನವರ (Siddaramaiah) ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್ (Mahadev) ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ.
ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ.
Advertisement
ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ. ಇದನ್ನೂ ಓದಿ: ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ
Advertisement
Advertisement
ಏನಿದು ವಿವಾದ?
ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು.
Advertisement
ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ.
ಆರಂಭದಲ್ಲಿ ಅಪ್ಪ ಹೇಳಿ ಅಂತಾ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ್ ಅವರಿಗೆ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ.
ಮಹದೇವ್‌ಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನಿಸಿದ್ದಾರೆ. ನನಗೆ ಅದೆಲ್ಲಾ ಗೊತ್ತಿಲ್ಲ. ನಾನು ಕೊಟ್ಟಿರುವ ನಾಲ್ಕು, ಐದು ಮಾತ್ರ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರ (CM Siddaramaiah) ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ (YST) ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆಯ ಜೊತೆ ಮಾತನಾಡುತ್ತಿರುವ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ಮತ್ತೆ ವಿಪಕ್ಷಗಳ ಟೀಕೆಗೆ ಗುರಿಯಾಗಿದೆ.