ಮುಂಬೈ: ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕಾಗಿ ಸೋನಾಕ್ಷಿಯನ್ನು ಮೊರಾದಾಬಾದ್‍ಗೆ ಬರುವಂತೆ ಕೇಳಲಾಗಿತ್ತು. ಅದಕ್ಕಾಗಿ 37 ಲಕ್ಷ ರೂ. ಹಣವನ್ನು ನೀಡಲಾಗಿತ್ತು. ಆದರೆ ಅವರು ಗೈರುಹಾಜರಾಗಿದ್ದರಿಂದ ಇದೀಗ ನ್ಯಾಯಾಲಯ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿದೆ. ಇದನ್ನೂ ಓದಿ: ಗಿಣಿಮೂಗಿನ ಹುಡುಗಿ ಜತೆ ಸಲ್ಲು ಸೀಕ್ರೆಟ್ ಮದುವೆ: ಫೋಟೋ ನೋಡಿ ನಕ್ಕರಾ ಸೋನಾಕ್ಷಿ ಸಿನ್ಹಾ
ನಡೆದಿದ್ದೇನು?: ಈವೆಂಟ್ ಆಯೋಜಕರಾದ ಪ್ರಮೋದ್ ಶರ್ಮಾ, ಮೊರಾದಾಬಾದ್‍ನ ಕಟ್ಘರ್ ಪೆÇಲೀಸ್ ಠಾಣೆ ಪ್ರದೇಶದ ನಿವಾಸಿಯಾಗಿದ್ದಾರೆ. ಇವರು ಕಾರ್ಯಕ್ರಮವೊಂದಕ್ಕೆ ಸೋನಾಕ್ಷಿಯನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದರು. ಈವೆಂಟ್‍ನಲ್ಲಿ ಸೋನಾಕ್ಷಿ ಭಾಗವಹಿಸಲಿಲ್ಲ. ಆಗ ಈವೆಂಟ್ ಆಯೋಜಕರು ಹಣವನ್ನು ಮರುಪಾವತಿ ಮಾಡುವಂತೆ ಹೇಳಿದ್ದಾರೆ. ಈವೆಂಟ್ ಆಯೋಜಕರಿಗೆ ಹಣ ನೀಡಲು ಸೋನಾಕ್ಷಿ ಮ್ಯಾನೇಜರ್ ನಿರಾಕರಿಸಿದ್ದರು ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಅವರಿಗೆ ಹಲವು ಬಾರಿ ಕರೆ ಮಾಡಿದರೂ ಹಣ ಸಿಗದಿದ್ದಾಗ ವಂಚನೆ ಪ್ರಕರಣ ದಾಖಲಾಗಿತ್ತು. ಗೈರುಹಾಜರಾಗಿದ್ದರಿಂದ ವಂಚನೆ ಪ್ರಕರಣದಲ್ಲಿ ನ್ಯಾಯಾಲಯ ಇದೀಗ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿದೆ. ಇದನ್ನೂ ಓದಿ: ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು
ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ಮತ್ತು ಸೋನಾಕ್ಷಿ ಸಿನ್ಹಾ ಮದುವೆ ಆಗಿದ್ದಾರೆ ಎಂಬ ಗಾಳಿ ಸುದ್ದಿ ಹರಿದಾಡಿತ್ತು. ಬೇರೆ ಯಾರದ್ದೋ ಮದುವೆ ಫೋಟೋಗೆ ಸೋನಾಕ್ಷಿ ಸಿನ್ಹಾ ಹಾಗೂ ಸಲ್ಮಾನ್ ಖಾನ್ ಅವರ ಮುಖವನ್ನು ಎಡಿಟ್ ಮಾಡಿ ಈ ರೀತಿ ವೈರಲ್ ಮಾಡಲಾಗಿತ್ತು. 2010ರಲ್ಲಿ ಸಲ್ಮಾನ್ ಖಾನ್ ನಟನೆಯ ‘ದಬಂಗ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುವ ಅವಕಾಶ ಸೋನಾಕ್ಷಿ ಸಿನ್ಹಾ ಅವರಿಗೆ ಸಿಕ್ಕಿತು. ನಂತರ ಅವರು ಸಾಲು ಸಾಲು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ‘ಡಬಲ್ ಎಕ್ಸ್‍ಎಲ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.