CrimeLatestLeading NewsMain PostNational

ಸೊನಾಲಿ ಫೋಗಟ್ ಆತ್ಮಹತ್ಯೆ ಪ್ರಕರಣ- ಇಬ್ಬರು ಸಹಚರರ ವಿರುದ್ಧ ಕೇಸ್

ನವದೆಹಲಿ: ಇತ್ತೀಚೆಗೆ ನಿಧನರಾದ ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್ ಅವರ ದೇಹದಲ್ಲಿ ಗಾಯಗಳಾಗಿರುವುದು ಮರಣೋತ್ತರ ಪರೀಕ್ಷೆ ವೇಳೆ ಗೊತ್ತಾಗಿದೆ. ಹೀಗಾಗಿ ಅವರ ಇಬ್ಬರು ಸಹಚರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ ಅಪರಾಧಕ್ಕೆ ದಂಡನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 22ರಂದು ಫೋಗಟ್ ಗೋವಾಕ್ಕೆ ಬಂದಾಗ ಅವರ ಜತೆ ಸುಧೀರ್ ಸಾಂಗ್ವಾನ್ ಹಾಗೂ ಸುಖ್ವಿಂದರ್ ವಾಸಿ ಎಂಬವರು ಇದ್ದರು. ಈ ಹಿನ್ನೆಲೆಯಲ್ಲಿ ಫೋಗಟ್ ಸಹೋದರ ರಿಂಕು ಧಾಕ ಅವರು ಅಂಜುನಾ ಪೊಲೀಸ್ ಠಾಣೆಯಲ್ಲಿ ಈ ಇಬ್ಬರ ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಇವರಿಬ್ಬರನ್ನು ಆರೋಪಿಗಳೆಂದು ಪರಿಗಣಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಪತಿಗೆ ತಿಳಿಸದೇ ಮಾಡಿದ್ದ 8 ಲಕ್ಷ ಸಾಲ ತೀರಿಸಲು ತಂದೆ-ತಾಯಿಗೆ ಟೀಯಲ್ಲಿ ಇಲಿ ಪಾಷಾಣ ಹಾಕಿದ್ಲು

ಅಲ್ಲದೇ ಸುಧೀರ್, ಸೋನಾಲಿಗೆ ತನ್ನ ರಾಜಕೀಯ ಹಾಗೂ ನಟನಾ ವೃತ್ತಿಯನ್ನು ನಾಶಮಾಡುವುದಾಗಿ ಬೆದರಿಕೆ ಹಾಕಿದ್ದನು. ಸೋನಾಲಿ ಸಾವಿನ ನಂತರ ಅವರ ಫಾರ್ಮ್ಹೌಸ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಲ್ಯಾಪ್‌ಟಾಪ್‌ಗಳು ಹಾಗೂ ಇತರ ಗ್ಯಾಜೆಟ್‌ಗಳೂ ಕಾಣೆಯಾಗಿವೆ ಎಂದೂ ರಿಂಕು ಧಾಕಾ ಆರೋಪಿಸಿದ್ದಾರೆ. ಇದನ್ನೂ ಓದಿ: ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

ಕುಟುಂಬದವರು ದೆಹಲಿಯ ಏಮ್ಸ್ನಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೋರಿದ್ದರು. ಆದರೆ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ ನಂತರ ಗೋವಾದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

42 ವರ್ಷ ವಯಸ್ಸಿನ ಫೋಗಟ್ ಸೋಮವಾರ ರಾತ್ರಿ ಗೋವಾದಲ್ಲಿ ಮೃತಪಟ್ಟಿದ್ದರು. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಆರಂಭದಲ್ಲಿ ಗೋವಾ ಡಿಜಿಪಿ ಜಸ್‌ಪಾಲ್ ಸಿಂಗ್ ತಿಳಿಸಿದ್ದರು. ಬಳಿಕ ಫೋಗಟ್ ಅವರ ಕುಟುಂಬದವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಸೊನಾಲಿ ಫೋಗಟ್ 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‌ದೀಪ್ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು. ಟಿಕ್ ಟಾಕ್‌ನಲ್ಲಿ ಜನಪ್ರಿಯರಾಗಿದ್ದ ಅವರು, 14ನೇ ಆವೃತ್ತಿಯ `ಬಿಗ್‌ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

Live Tv

Leave a Reply

Your email address will not be published.

Back to top button