ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ (NEET Paper Leak) ಸಂಬಂಧಿಸಿದಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಯಾವುದೇ ಕಾನೂನು ಕ್ರಮಕೈಗೊಳ್ಳದಿದ್ದರೆ, ನಾನು ಉಪವಾಸ ಸತ್ಯಾಗ್ರಹ ನಿಲ್ಲಿಸುತ್ತೇನೆ ಎಂದು ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಹೇಳಿದ್ದಾರೆ.
ಈ ಸಂಬಂಧ ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ವಾಂಗ್ಚುಕ್ ಪತ್ರ ಬರೆದಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಕ್ರಮಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದರೆ, ಉಪವಾಸ ಸತ್ಯಾಗ್ರಹ ಕೊನೆಗೊಳಿಸುತ್ತೇನೆ. ಒಂದು ವೇಳೆ ಸರ್ಕಾರದಿಂದ ಅಂತಹ ಭರವಸೆ ಸಿಗದಿದ್ದರೆ, ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ ಮುಂದುವರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, 152 ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ ಬಾಂಬ್
ಚಳವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಯುವ ಪ್ರತಿಭಟನಾಕಾರರು ಯಾವುದೇ ಶಿಕ್ಷೆಯ ಅಥವಾ ಪ್ರತೀಕಾರದ ಕಾನೂನು ಕ್ರಮವನ್ನು ಎದುರಿಸುವುದಿಲ್ಲ ಎಂದು ಸರ್ಕಾರ ನನಗೆ ಭರವಸೆ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರತಿಭಟನಾಕಾರರು ನ್ಯಾಯಯುತ ಮತ್ತು ಜವಾಬ್ದಾರಿಯುತ ಶಿಕ್ಷಣ ವ್ಯವಸ್ಥೆಗಾಗಿ ಮಾತ್ರ ಧ್ವನಿ ಎತ್ತುತ್ತಿದ್ದಾರೆ ಎಂದು ವಾಂಗ್ಚುಕ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಕ್ಕೆ ಬರೆದ ಪತ್ರದಲ್ಲಿ, ನಿನ್ನೆ ರಾತ್ರಿ ಮೇದಾಂತದಲ್ಲಿ ತಮ್ಮನ್ನು ಭೇಟಿ ಮಾಡಿದ್ದಕ್ಕಾಗಿ ನಡ್ಡಾ ಮತ್ತು ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಹೈಟೆಕ್ ಪರೀಕ್ಷಾ ಅಕ್ರಮ ಬಯಲು: 35 ಮಂದಿ ಅರೆಸ್ಟ್, 13 ಲಕ್ಷಕ್ಕೆ ಡೀಲ್
ಮೂರು ವಾರಗಳ ಉಪವಾಸ ಸತ್ಯಾಗ್ರಹದ ನಂತರ 59 ವರ್ಷದ ಸೋನಮ್ ವಾಂಗ್ಚುಕ್ ಅವರನ್ನು ಶನಿವಾರ ಜಂತರ್ ಮಂತರ್ ಪ್ರತಿಭಟನಾ ಸ್ಥಳದಿಂದ ಪೊಲೀಸರು ಸ್ಥಳಾಂತರಿಸಿದ್ದರು. ಆದರೆ, ಅವರು ತಮ್ಮ ಉಪವಾಸವನ್ನು ಕೊನೆಗೊಳಿಸಲು ನಿರಾಕರಿಸಿದರು. ಗುರುಗ್ರಾಮ್‌ನ ಖಾಸಗಿ ಮೇದಾಂತ ಆಸ್ಪತ್ರೆಯಲ್ಲಿ 25 ನೇ ದಿನವಾದ ಇಂದು ಕೂಡ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
