ಜೈಪುರ: ಮಾಜಿ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ (Sonam Wangchuk) ಅವರ ಆರೋಗ್ಯ ಜೈಲಿನಲ್ಲಿ ಹೆದಗೆಟ್ಟಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶದ ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೋಧ್‌ಪುರದ (Jodhpur) ಏಮ್ಸ್‌ಗೆ (AIIMS) ಶಿಫ್ಟ್ ಮಾಡಲಾಗಿದೆ.
ಇಂದು ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಏಮ್ಸ್‌ನ ತುರ್ತು ವಿಭಾಗಕ್ಕೆ ಪೊಲೀಸರು ವಾಂಗ್‌ಚುಕ್‌ರನ್ನು ಕರೆತಂದು ಒಂದೂವರೆ ಗಂಟೆಗಳ ಕಾಲ ಅವರ ಮೇಲೆ ನಿಗಾ ವಹಿಸಲಾಗಿತ್ತು. ಗ್ಯಾಸ್ಟ್ರೋ ಎಂಟರಾಲಜಿ ಘಟಕದಲ್ಲಿ ಪರೀಕ್ಷಿಸಲಾಯಿತು. ವಾಂಗ್‌ಚುಕ್ ಅವರು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದು, ದೇಹದ ಹಲವು ಭಾಗಗಳಲ್ಲಿ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ. ಶುಕ್ರವಾರವೂ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಏಮ್ಸ್‌ಗೆ ಕರೆದೊಯ್ಯಲಾಗಿತ್ತು. ಪರೀಕ್ಷೆಯ ನಂತರ ಅವರನ್ನು ಬಿಗಿ ಭದ್ರತೆಯಲ್ಲಿ ಜೋಧ್‌ಪುರ ಕೇಂದ್ರ ಕಾರಾಗೃಹಕ್ಕೆ ವಾಪಸ್ ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹಳ್ಳ ಹಿಡಿದ ʻಮೈಸೂರು – ಕುಶಾಲನಗರ ರೈಲ್ವೆ ಯೋಜನೆʼ- ಯದುವೀರ್ ಒಡೆಯರ್ ಬೇಸರ
ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರ ಪತ್ನಿ, ಹಿರಿಯ ವಕೀಲ ಕಪಿಲ್ ಸಿಬಲ್ ಮೂಲಕ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಾಂಗ್ ಚುಕ್ ಅವರನ್ನು ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಪರೀಕ್ಷಿಸುವಂತೆ ಜೈಲು ಆಡಳಿತಕ್ಕೆ ಸೂಚಿಸಿತು. ಇದನ್ನೂ ಓದಿ: ಪ್ರಾಣಿಗಳನ್ನು ನೋಡಿಕೊಳ್ಳಲು ಆಗದಿದ್ರೆ ಪಿಲಿಕುಳ ಮೃಗಾಲಯ ಬಂದ್ ಮಾಡಿ – ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ

