– ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಅಘೋಷಿತ ತುರ್ತು ಪರಿಸ್ಥಿತಿಯಲ್ಲಿದೆ; ಕಳವಳ
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಂಧಿತರಾದವರನ್ನ ಭಾನುವಾರದೊಳಗೆ ಬಿಡುಗಡೆ ಮಾಡದಿದ್ದರೆ ಉಪವಾಸ ಸತ್ಯಾಗ್ರಹ (Hunger Strike) ಅಥವಾ ಪಾದಯಾತ್ರೆ ನಡೆಸಬೇಕಾಗಬಹುದು ಎಂದು ಹೋರಾಟಗಾರ ಸೋನಂ ವಾಂಗ್ಚುಕ್ (Sonam Wangchuk) ಎಚ್ಚರಿಸಿದ್ದಾರೆ.
INDIA IN A STATE OF UNDECLARED EMERGENCY…
Yesterday when I posted a message appealing for unity & peace in today’s protest I had never imagined that the biggest democracy in the world would be under an undeclared EMERGENCY.
I was happy there were so many leaders to lead the movement, but I now learn that they have all been arrested. I hope those arrested will be released soon. I will be compelled to consider an Anshan Fast or Padyatra March if they are not released by tomorrow.
#JantarMantar #protest #CJP #CEC #sonamwangchuk— Sonam Wangchuk (@Wangchuk66) October 10, 2026
ಎಕ್ಸ್ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ವಾಂಗ್ಚುಕ್, ದೆಹಲಿಯ ಪರಿಸ್ಥಿತಿಯನ್ನು ಅಘೋಷಿತ ತುರ್ತು ಪರಿಸ್ಥಿತಿ ಎಂದು ಕರೆದಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ಅಘೋಷಿತ ತುರ್ತು ಪರಿಸ್ಥಿತಿಯಲ್ಲಿರೋದನ್ನ ನಾನು ಎಂದಿಗೂ ಊಹಿಸಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದವರನ್ನ ಬಂಧಿಸಿರುವುದಕ್ಕೆ ಆಕ್ಷೇಪಿಸಿದ್ದಾರೆ.
ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಆಯೋಜಿಸಲಾಗಿತ್ತು.

ಶನಿವಾರ ಬಂಧಿತರಾದವರಲ್ಲಿ ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು AISA ನಾಯಕಿ ನೇಹಾ ಬೋರಾ ಕೂಡ ಇದ್ದಾರೆ. ಪ್ರತಿಭಟನೆಗೆ ಅನುಮತಿ ನೀಡಿಲ್ಲ ಎಂದು ತಿಳಿಸಿ ದೆಹಲಿ ಪೊಲೀಸರು ಹಲವು ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ಬಳಿಕ ಕೇಜ್ರಿವಾಲ್, ಎಎಪಿ ನಾಯಕ ಸಂಜಯ್ ಸಿಂಗ್ ಅವರೊಂದಿಗೆ ವಿಡಿಯೋವೊಂದನ್ನ ಎಕ್ಸ್ನಲ್ಲಿ ಹಂಚಿಕೊಂಡಿದ್ದು, ಪ್ರತಿಭಟನಾಕಾರರನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

