ಪಡ್ಡೆಹುಲಿ ಚಿತ್ರದ ಮೂಲಕ ಭರವಸೆಯ ನಾಯಕನಾಗಿ ಗುರುತಿಸಿಕೊಂಡಿದ್ದ ಯುವನಟ ಶ್ರೇಯಸ್ ಮಂಜು (Shreyas Manju) ಇದೀಗ ವಿಷ್ಣುಪ್ರಿಯನಾಗಿ (Vishnupriya) ಪ್ರೇಕ್ಷಕರೆದುರು ಬರಲು ಅಣಿಯಾಗಿದ್ದಾರೆ. ತೊಂಬತ್ತರ ದಶಕದಲ್ಲಿ ನಡೆಯುವ ರೆಟ್ರೋ ಪ್ರೇಮಕಥಾನಕ ಈ ಚಿತ್ರದಲ್ಲಿದ್ದು, ನಟ ಶ್ರೇಯಸ್ ಅವರ ಪಾಲಿಗೂ ಇದೊಂದು ಮಹತ್ವದ ಚಿತ್ರವಾಗಿದೆ.
ಜ.27ರಂದು ವಿಷ್ಣುಪ್ರಿಯ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ. ಅದೇ ದಿನ ಚಿತ್ರದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಲಿದೆ. ಮಲೆಯಾಳಂನ ಗೋಪಿ ಸುಂದರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡುಗಳು ಕುತೂಹಲ ಮೂಡಿಸಿವೆ.
ಗಂಡುಗಲಿ ಕೆ. ಮಂಜು ಅವರ ನಿರ್ಮಾಣದ, ರಾಷ್ಟ್ರಪ್ರಶಸ್ತಿ ವಿಜೇತ ವಿ.ಕೆ. ಪ್ರಕಾಶ್ ಅವರ ನಿರ್ದೇಶನದ ಈ ಚಿತ್ರದಲ್ಲಿ ತೊಂಭತ್ತರ ದಶಕದ ಕೌಟುಂಬಿಕ ಮೌಲ್ಯಗಳ ಹಿನ್ನೆಲೆಯ ವಿಶಿಷ್ಠ ಪ್ರೇಮ ಕಥಾನಕವಿದೆ.
ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಅವರು ಶ್ರೇಯಸ್ ಮಂಜು ಅವರ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಅಚ್ಯುತ್ ಕುಮಾರ್ ಉಳಿದ ಪಾತ್ರವರ್ಗದಲ್ಲಿದ್ದಾರೆ.