Connect with us

Latest

ಸೋನಿಯಾ ಗಾಂಧಿ ಅಸ್ವಸ್ಥ: ದೆಹಲಿ ಆಸ್ಪತ್ರೆಗೆ ದಾಖಲು

Published

on

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸ್ವಸ್ಥಗೊಂಡಿದ್ದು ದೆಹಲಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

71 ವರ್ಷದ ಸೋನಿಯಾ ಗಾಂಧಿ ಶಿಮ್ಲಾಗೆ ತೆರಳಿದ್ದರು. ಇಂದು ಆರೋಗ್ಯದಲ್ಲಿ ಏರುಪೇರು ಕಾಣಿಸಿದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯ ವೇಳೆ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯ ಮುಖ್ಯಸ್ಥ ಡಾ. ಡಿಎಸ್ ರಾಣಾ ಪ್ರತಿಕ್ರಿಯಿಸಿ, ಹೊಟ್ಟೆ ಆರೋಗ್ಯ ಸಮಸ್ಯೆಯಿಂದ ಸೋನಿಯಾ ಗಾಂಧಿ ಬಳಲುತ್ತಿದ್ದು, ಶುಕ್ರವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ನವೆಂಬರ್ 9 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಹೆಸರು ತಾರಾ ಪ್ರಚಾರಕರ ಪಟ್ಟಿಯಲ್ಲಿದೆ. ಪ್ರಚಾರಕ್ಕೆ ಶಿಮ್ಲಾಗೆ ತೆರಳಿದ್ದ ವೇಳೆ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದಾರೆ.

ಸೋನಿಯಾ ಗಾಂಧಿ ಅವರು ಕೆಲ ವರ್ಷದಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಈ ವರ್ಷದ ಮೇ ತಿಂಗಳಿನಲ್ಲಿ ಅನಾರೋಗ್ಯದಿಂದಾಗಿ ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಹಿಂದೆ 2016ರ ಆಗಸ್ಟ್ ನಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಅಂಗವಾಗಿ ವಾರಣಾಸಿಯಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ತೀವ್ರ ಜ್ವರದಿಂದಾಗಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು.

Click to comment

Leave a Reply

Your email address will not be published. Required fields are marked *