ಬೆಂಗಳೂರು: ಮೇ 25 ರಂದು ದೆಹಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೂಚಿಸಿದ್ದಾರೆ.
ಮೇ 25 ರಂದು ವಿಶ್ವಾಸಮತ ಸಾಬೀತು ನಡೆಯಲಿದ್ದು, ನಂತರ ದೆಹಲಿಗೆ ಬನ್ನಿ ಎಂದು ತಿಳಿಸಿದ್ದಾರೆ. ಸಂಪುಟ ವಿಸ್ತರಣೆ, ಸಮನ್ವಯ ಸಮಿತಿ ರಚನೆ ಕುರಿತಂತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ಮೇ 25 ರಂದು ಸಂಜೆ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಡಿಸಿಎಂ ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೊದಲಾದ ನಾಯಕರಿಗೆ ದೆಹಲಿಗೆ ಆಗಮಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಸಂಪುಟ ವಿಸ್ತರಣೆಯಲ್ಲಿ ಸಾಕಷ್ಟು ಗೊಂದಲಗಳಿದ್ದು, ಲಿಂಗಾಯತ ಮುಖಂಡರೊಬ್ಬರಿಗೆ ಡಿಸಿಎಂ ಪಟ್ಟ ನೀಡಬೇಕೆಂದು ಕೂಗ ಕೇಳಿ ಬಂದಿತ್ತು. ಇತ್ತ ಡಿ.ಕೆ.ಶಿವಕುಮಾರ್ ಇಂದು ಮಾಧ್ಯಮಗಳ ಮುಂದೆ ಅಸಮಾಧಾನ ಹೊರಹಾಕಿದ್ದು, ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿಶ್ವಾಸ ಮತ ಸಾಬೀತಾದ ಬಳಿಕ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ.